ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನಾರೋಗ್ಯದಿಂದಾಗಿ ಸೋಮವಾರ ನಗರದ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.
63 ವರ್ಷದ ನಿರ್ಮಲಾ ಅನಾರೋಗ್ಯದಿಂದಾಗಿ ಆಸ್ಪತ್ರೆಯ ಖಾಸಗಿ ವಾರ್ಡ್‌ಗೆ ದಾಖಲಾಗಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ. ಈ ಬಗ್ಗೆ ಸಚಿವಾಲಯದಿಂದ ಅಥವಾ ಸಂಬಂಧಿತರಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಂದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.