ADVERTISEMENT

ಆರ್ಥಿಕ ಬೆಳವಣಿಗೆ ನಿಧಾನವಾಗಿದೆ, ಆದರೆ ಹಿಂಜರಿತವಿಲ್ಲ: ನಿರ್ಮಲಾ ಸೀತಾರಾಮನ್

ರಾಜ್ಯಸಭೆಯಲ್ಲಿ ಹೇಳಿಕೆ

ಏಜೆನ್ಸೀಸ್
Published 27 ನವೆಂಬರ್ 2019, 13:15 IST
Last Updated 27 ನವೆಂಬರ್ 2019, 13:15 IST
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)   

ನವದೆಹಲಿ:ದೇಶದ ಆರ್ಥಿಕ ಬೆಳವಣಿಗೆ ನಿಧಾನವಾಗಿರುವುದು ನಿಜ. ಆದರೆ, ಆರ್ಥಿಕ ಹಿಂಜರಿತವಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ರಾಜ್ಯಸಭೆಯಲ್ಲಿ ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದ ಚರ್ಚೆ ವೇಳೆ ಪ್ರತಿಪಕ್ಷಗಳು ಮಾಡಿದ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ‘ದೇಶದಲ್ಲಿ ಆರ್ಥಿಕ ಹಿಂಜರಿತವಿಲ್ಲ, ಮುಂದೆಯೂ ಇರುವುದಿಲ್ಲ. ಬೇಕಿದ್ದರೆ ನಾವು ಕೈಗೊಂಡ ಪ್ರತಿಯೊಂದು ಕ್ರಮದ ಬಗ್ಗೆಯೂ ದಾಖಲೆ ಮುಂದಿಡುವೆ’ ಎಂದು ಹೇಳಿದ್ದಾರೆ. ಜತೆಗೆ, ಎನ್‌ಡಿಎ ಅಧಿಕಾರಾವಧಿಯ ಹಣದುಬ್ಬರ ಹಾಗೂ ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ಅಂಕಿಅಂಶಗಳನ್ನುಯುಪಿಎ ಅವಧಿಯ ಅಂಕಿಅಂಶಗಳ ಜತೆ ತುಲನೆ ಮಾಡಿದ್ದಾರೆ.

2009-2014ರ ಅವಧಿಯಲ್ಲಿ 189.5 ಶತಕೋಟಿ ಡಾಲರ್ ಇದ್ದ ವಿದೇಶಿ ನೇರ ಹೂಡಿಕೆ 2019ರಲ್ಲಿ 283.9 ಶತಕೋಟಿ ಡಾಲರ್ ಆಗಿದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅವಧಿಯ ಆರ್ಥಿಕ ವೃದ್ಧಿ ದರ ಪ್ರಮಾಣವನ್ನು ಸರ್ಕಾರ ಶುಕ್ರವಾರ ಬಿಡುಗಡೆ ಮಾಡಲಿದೆ. 2020ರ ಮಾರ್ಚ್‌ಗೆ ಕೊನೆಗೊಳ್ಳಲಿರುವ ಹಣಕಾಸು ವರ್ಷದ ಆರ್ಥಿಕ ಬೆಳವಣಿಗೆಯೂ ಕುಂಠಿತವಾಗಿರಲಿದೆ ಎಂದು ಅನೇಕ ಅರ್ಥಶಾಸ್ತ್ರಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕ ವೃದ್ಧಿ ದರವು ಶೇ 5.6ರಷ್ಟು ಇರಲಿದೆ ಎಂದು ಜಾಗತಿಕ ಮೌಲ್ಯಮಾಪನ ಸಂಸ್ಥೆ ಮೂಡೀಸ್‌ ಇನ್‌ವೆಸ್ಟರ್ಸ್‌ ಸರ್ವಿಸ್‌ ಇತ್ತೀಚೆಗೆ ಅಂದಾಜಿಸಿತ್ತು. ಇದಕ್ಕೆ, ಸರಕು ಮತ್ತು ಸೇವೆಗಳ ಬೇಡಿಕೆ ಕುಸಿತಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಕೈಗೊಂಡಿದ್ದ ಕ್ರಮಗಳು ಉದ್ದೇಶಿತ ಫಲ ನೀಡಿಲ್ಲ ಎಂಬ ಕಾರಣವನ್ನುಮೂಡೀಸ್‌ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.