ADVERTISEMENT

ಆರ್‌.ಜಿ ಕರ್‌ ಆಸ್ಪತ್ರೆ | ಘೋಷ್‌ಗೆ ಸಂಬಂಧಿಸಿದ ಸ್ಥಳಗಳಲ್ಲಿ ಸಿಬಿಐ ಶೋಧ

ಪಿಟಿಐ
Published 25 ಆಗಸ್ಟ್ 2024, 4:38 IST
Last Updated 25 ಆಗಸ್ಟ್ 2024, 4:38 IST
<div class="paragraphs"><p>ಸಂದೀಪ್‌ ಘೋಷ್‌</p></div>

ಸಂದೀಪ್‌ ಘೋಷ್‌

   

ಚಿತ್ರ ಕೃಪೆ: rgkarmch.in

ನವದೆಹಲಿ: ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್‌ ಘೋಷ್‌ ಅವರ ಅಧಿಕಾರಾವಧಿಯಲ್ಲಿ ಸಂಸ್ಥೆಯಲ್ಲಿ ನಡೆದಿರುವ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಘೋಷ್‌ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಆರೋಪಿ ಮತ್ತು ಅವರ ಸಹಚರರಿಗೆ ಸೇರಿದ ನಗರದ ಇತರ 14 ಸ್ಥಳಗಳಲ್ಲಿ ಕೇಂದ್ರ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್‌ 9ರಂದು ಆಸ್ಪತ್ರೆಯ ಸೆಮಿನಾರ್‌ ಸಭಾಂಗಣದಲ್ಲಿ ವೈದ್ಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಲಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಸಂಜಯ್‌ ರಾಯ್‌ ಎಂಬಾತನನ್ನು ಬಂಧಿಸಲಾಗಿದೆ.

ಹತ್ಯೆ ಪ್ರಕರಣ ಮತ್ತು ಆಪಾದಿತ ಹಣಕಾಸಿನ ಅಕ್ರಮಗಳ ಕುರಿತು ಕಲ್ಕತ್ತ ಹೈಕೋರ್ಟ್‌ ನಿರ್ದೇಶನದ ಮೇರೆಗೆ ಸಿಬಿಐ ಪ್ರಕರಣಗಳನ್ನು ದಾಖಲಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.