ಕೋಲ್ಕತ್ತ: ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರಿಂದ ಕಿರುಕುಳಕ್ಕೊಳಗಾಗಿದ್ದಾರೆ ಎನ್ನಲಾದ ಮಹಿಳೆಯನ್ನು ಅಕ್ರಮವಾಗಿ ನಿರ್ಬಂಧಿಸಿದ ಆರೋಪದಲ್ಲಿ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತೆ ಮಹಿಳೆ ಮ್ಯಾಜಿಸ್ಟ್ರೇಟ್ ಎದುರು ಹೇಳಿಕೆ ದಾಖಲಿಸಿದ ಬಳಿಕ ಹರೆ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ಮೂವರು ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ.
‘ಮೇ 2ರಂದು ರಾಜಭವನದಿಂದ ನಿರ್ಗಮಿಸುವುದನ್ನು ಬಲವಂತವಾಗಿ ತಡೆದ ಆರೋಪದಲ್ಲಿ ಮೂವರ ಮೇಲೆ ಎಫ್‌ಐಆರ್ ದಾಖಲು ಮಾಡಲಾಗಿದೆ. ಇದರಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮೇ 2ರಂದು ರಾಜ್ಯಪಾಲರು ತಮ್ಮ ಮೇಲೆ ಲೈಂಗಿಕ ಕಿರುಕುಳ ಎಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಬಳಿಕ ಕೋಲ್ಕತ್ತ ಪೊಲೀಸರು ತನಿಖೆ ಆರಂಭಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.