ADVERTISEMENT

ಜಮ್ಮು: ವೈಷ್ಣೋದೇವಿ ದೇಗುಲದ ಸಂಕೀರ್ಣದಲ್ಲಿ ಬೆಂಕಿ ದುರಂತ, ನಗದು –ದಾಖಲೆ ಭಸ್ಮ

ಏಜೆನ್ಸೀಸ್
Published 8 ಜೂನ್ 2021, 13:25 IST
Last Updated 8 ಜೂನ್ 2021, 13:25 IST
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ –ಪಿಟಿಐ ಚಿತ್ರ
ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ –ಪಿಟಿಐ ಚಿತ್ರ   

ಜಮ್ಮು: ಇಲ್ಲಿನ ರಿಯಾಸಿ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಾತಾ ವೈಷ್ಣೋದೇವಿ ದೇವಾಲಯ ಸಂಕೀರ್ಣದ ಒಳಗೆ ಇರುವ ಕಟ್ಟಡದಲ್ಲಿ ಮಂಗಳವಾರ ಸಂಜೆ ಬೆಂಕಿ ದುರಂತ ಸಂಭವಿಸಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಅವಘಡ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಜೆ 4.15 ರ ಸುಮಾರಿಗೆ ಗರ್ಭಗೃಹದ ಪಕ್ಕದಲ್ಲಿರುವ ಕಾಳಿಕಾ ಭವನದ ನಗದು ಎಣಿಕೆಯ ಕೋಣೆಯೊಳಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ ಯಾವುದೇ ಸಾವುಗಳು ವರದಿಯಾಗಿಲ್ಲ.

ADVERTISEMENT

ಬೆಂಕಿಯಿಂದಾಗಿ ಅಪಾರ ಪ್ರಮಾಣದ ನಗದು ಸೇರಿದಂತೆ ದಾಖಲೆಗಳು ಸುಟ್ಟು ಹೋಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ’ ಎಂದು ರಿಯಾಸಿ ಜಿಲ್ಲೆಯ ಹಿರಿಯ ಪೊಲೀಸ್‌ ವರಿಷ್ಠಾಧಿಕಾರಿ ಶೈಲೇಂದರ್‌ ಸಿಂಗ್ ತಿಳಿಸಿದ್ದಾರೆ.

ಮಾತಾ ವೈಷ್ಣೋದೇವಿ ದೇವಾಲಯ ಸಂಕೀರ್ಣದ ಒಳಗಿನ ಕಟ್ಟಡದಲ್ಲಿ ಮಂಗಳವಾರ ಸಂಜೆ ಬೆಂಕಿ ಕಾಣಿಸಿಕೊಂಡಿರುವ ದೃಶ್ಯ –ಪಿಟಿಐ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.