ADVERTISEMENT

ಹೌರಾ: ಶಾಲೆಯಲ್ಲಿ ಬೆಂಕಿ ಅವಘಡ, ಶಿಕ್ಷಕಿಯರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 27 ಜೂನ್ 2024, 14:25 IST
Last Updated 27 ಜೂನ್ 2024, 14:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಉಂಟಾದ ಬೆಂಕಿ ಅವಘಡದಿಂದಾಗಿ ಇಬ್ಬರು ಶಿಕ್ಷಕಿಯರು ಗಾಯಗೊಂಡಿದ್ದಾರೆ.

ಗುರುವಾರ ಬೆಳಿಗ್ಗೆ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಘಟನೆ ಜರುಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ADVERTISEMENT

ಭಟ್ಟನಗರದಲ್ಲಿರುವ ಶಾಲೆಯಲ್ಲಿ ಈ ವೇಳೆ ಕೆಲವು ಮಕ್ಕಳು ಹಾಜರಿದ್ದರು. ಆದರೆ, ಅವರೆಲ್ಲ ಬೇರೆ ಭಾಗದಲ್ಲಿದ್ದರು.

ಎರಡು ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ನಂದಿಸಿವೆ ಎಂದು ಪೊಲೀಸರು ಹೇಳಿದ್ದಾರೆ.

ಶಾಲೆಯ ಮುಖ್ಯಶಿಕ್ಷಕಿ ತಪಸಿ ಗೋಸ್ವಾಮಿ ಸೇರಿದಂತೆ ಗಾಯಗೊಂಡ ಇಬ್ಬರು ಶಿಕ್ಷಕಿಯರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. 

ಘಟನೆಯ ವೇಳೆ ಬೆರಳೆಣಿಯಷ್ಟು ವಿದ್ಯಾರ್ಥಿಗಳು ಮಾತ್ರ ಶಾಲೆ ತಲುಪಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಲಿಂಡರ್‌ನಿಂದ ಅನಿಲ ಸೋರಿಕೆ  ಉಂಟಾಗಿರುವುದು ಘಟನೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.