ADVERTISEMENT

ಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಬೆಂಕಿ ಅವಘಡ; ಪ್ರಯಾಣಿಕರು ಸುರಕ್ಷಿತ

ಪಿಟಿಐ
Published 20 ಮಾರ್ಚ್ 2021, 4:17 IST
Last Updated 20 ಮಾರ್ಚ್ 2021, 4:17 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಉತ್ತರ ಪ್ರದೇಶದ ಗಾಜಿಯಾಬಾದ್ ರೈಲು ನಿಲ್ದಾಣದಲ್ಲಿ ಶತಾಬ್ದಿ ಎಕ್ಸ್‌ಪ್ರೆಸ್‌ನ ಲಗ್ಗೇಜ್ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನವದೆಹಲಿ-ಲಖನೌ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ಬೆಂಕಿ ಆಕಸ್ಮಿಕ ಸಂಭವಿಸಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತರಾಗಿದ್ದು, ಯಾರೂ ಗಾಯಗೊಂಡಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಶತಾಬ್ದಿ ಎಕ್ಸ್‌ಪ್ರೆಸ್‌ ಶನಿವಾರ ಬೆಳಗ್ಗೆ 6.41ರ ಹೊತ್ತಿಗೆ ಗಾಜಿಯಾಬಾದ್ ನಿಲ್ದಾಣಕ್ಕೆ ತಲುಪಿತ್ತು. ಬೆಂಕಿ ಅವಘಡದ ಬೆನ್ನಲ್ಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿಯನ್ನು ನಂದಿಸಲು ನೆರವಾದರು.

ADVERTISEMENT

ಬೆಂಕಿ ಹೊತ್ತಿಕೊಂಡಿರುವ ಬೋಗಿಯನ್ನು ಬೇರ್ಪಡಿಸಿದ ಬಳಿಕ 8.20ರ ಸುಮಾರಿಗೆ ರೈಲು ತನ್ನ ಗಮ್ಯಸ್ಥಾನಕ್ಕೆ ಪ್ರಯಾಣವನ್ನು ಬೆಳೆಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ದೆಹಲಿಯಿಂದ ಡೆಹ್ರಾಡೂನ್‌ಗೆ ಸಂಪರ್ಕ ಕಲ್ಪಿಸುವ ಶತಾಬ್ದಿ ಎಕ್ಸ್‌ಪ್ರೆಸ್‌ ರೈಲು ಉತ್ತರಾಖಂಡದ ಕಾನ್ಸ್ರೋ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆ ಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.