ADVERTISEMENT

ಬಿಷ್ಣೋಯಿ ಗ್ಯಾಂಗ್‌ ಸದಸ್ಯನ ಬಂಧನ

ಸಲ್ಮಾನ್‌ ಖಾನ್‌ ನಿವಾಸದೆರುರು ದಾಳಿ ಪ್ರಕರಣ

ಪಿಟಿಐ
Published 7 ಮೇ 2024, 14:19 IST
Last Updated 7 ಮೇ 2024, 14:19 IST
.
.   

ಮುಂಬೈ (ಪಿಟಿಐ): ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ನಿವಾಸದ ಎದುರು ಗುಂಡಿನ ದಾಳಿ ನಡೆಸಿದ ಪ್ರಕರಣದಲ್ಲಿ ದಾಳಿಕೋರರಿಗೆ ಆರ್ಥಿಕ ನೆರವು ನೀಡಿದ ಆರೋಪದ ಮೇಲೆ ಲಾರೆನ್ಸ್‌ ಬಿಷ್ಣೋಯಿ ಗ್ಯಾಂಗ್‌ನ ಸದಸ್ಯನೊಬ್ಬನನ್ನು ರಾಜಸ್ಥಾನದಲ್ಲಿ ಮುಂಬೈ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ರಫೀಕ್‌ ಚೌದರಿ (37) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿದಂತಾಗಿದೆ. ಈ ಪೈಕಿ ಒಬ್ಬ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

‘ಬಂಧಿತರ ವಿಚಾರಣೆ ವೇಳೆ ಪ್ರಕರಣದಲ್ಲಿ ಚೌದರಿಯ ಪಾತ್ರ ಬಯಲಾಗಿದೆ. ಈತ ಶೂಟರ್‌ಗಳಾದ ಸಾಗರ್‌ ಪಾಲ್‌ ಮತ್ತು ವಿಕಿ ಗುಪ್ತಾ ಜೊತೆ ಈತ ನೇರ ಸಂಪರ್ಕದಲ್ಲಿದ್ದ’ ಎಂದು ಹೇಳಿದ್ದಾರೆ.

ADVERTISEMENT

‘ಪಾಲ್‌ ಮತ್ತು ಗುಪ್ತಾ ಬೈಕ್‌ ಖರೀದಿಸಲು ಮತ್ತು ಬಾಡಿಗೆ ಮನೆ ಮಾಡಲು ಚೌದರಿ ಹಣಕಾಸು ನೆರವು ನೀಡಿದ್ದ ಎಂದು ಶಂಕಿಸಲಾಗಿದೆ’ ಎಂದು ತಿಳಿಸಿದ್ದಾರೆ.

ಏಪ್ರಿಲ್‌ 14ರಂದು ಎರಡು ಬೈಕ್‌ನಲ್ಲಿ ಬಂದಿದ್ದ ದುಷ್ಕರ್ಮಿಗಳು  ಮುಂಬೈನ ಬಾಂದ್ರಾದಲ್ಲಿರುವ  ಸಲ್ಮಾನ್‌ ಖಾನ್‌ ಅವರ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌  ಎದುರು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.