ADVERTISEMENT

ಕರ್ನಾಟಕದಲ್ಲಿ ‘ಗ್ಯಾರಂಟಿ’ ಯಶಸ್ವಿ ಜಾರಿ: ಸಚಿವ ಜಿ.ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2024, 15:35 IST
Last Updated 15 ನವೆಂಬರ್ 2024, 15:35 IST
ಜಿ.ಪರಮೇಶ್ವರ
ಜಿ.ಪರಮೇಶ್ವರ   

ಮುಂಬೈ: ‘ಕರ್ನಾಟಕದಲ್ಲಿ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಎಲ್ಲ ಐದು ಗ್ಯಾರಂಟಿಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ.

‘ಕರ್ನಾಟಕದ ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಒಳಗೊಂಡಂತೆ ಬಿಜೆಪಿ ನಾಯಕರು ಮಾಡಿರುವ ಆರೋಪಗಳನ್ನು ಅವರು ಅಲ್ಲಗಳೆದರು.

‘ಗ್ಯಾರಂಟಿಗಳ ಅನುಷ್ಠಾನವನ್ನು ಪರಿಶೀಲಿಸಲು ಕರ್ನಾಟಕಕ್ಕೆ ಬರುವಂತೆ ಬಿಜೆಪಿ ನಾಯಕರನ್ನು ಸ್ವಾಗತಿಸುತ್ತೇನೆ’ ಎಂದು ಅವರು ಶುಕ್ರವಾರ ಸುದ್ದಿಗಾರರಲ್ಲಿ ತಿಳಿಸಿದರು.

ADVERTISEMENT

‘ಸರ್ಕಾರ ರಚನೆಯಾದ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಲು ನಿರ್ಧರಿಸಲಾಯಿತು. ಕಾಂಗ್ರೆಸ್‌ನ ಐದು ಗ್ಯಾರಂಟಿಗಳ ಬಗ್ಗೆ ಮೋದಿ ಹಾಗೂ ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಗ್ಯಾರಂಟಿಗಳಿಗಾಗಿ ಬಜೆಟ್‌ನಲ್ಲೇ ₹56,000 ಕೋಟಿ ಮೀಸಲಿಟ್ಟಿರುವುದರಿಂದ ಯೋಜನೆಗಳ ಅನುಷ್ಠಾನಕ್ಕೆ ಸಾಕಷ್ಟು ಹಣವಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.