ADVERTISEMENT

ಮಧ್ಯಪ್ರದೇಶ | ಎರಡು ಪ್ರತ್ಯೇಕ ಅಪಘಾತದಲ್ಲಿ ಐದು ಮಂದಿ ಸಾವು, 12 ಜನರಿಗೆ ಗಾಯ

ಪಿಟಿಐ
Published 27 ಅಕ್ಟೋಬರ್ 2024, 10:38 IST
Last Updated 27 ಅಕ್ಟೋಬರ್ 2024, 10:38 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಬೇತುಲ್‌ (ಮಧ್ಯಪ್ರದೇಶ): ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಐದು ಮಂದಿ ಮೃತಪಟ್ಟಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಇಂದು (ಭಾನುವಾರ) ಮುಂಜಾನೆ 7 ಗಂಟೆ ಸುಮಾರಿಗೆ ಬೇತುಲ್‌–ಪಾರಾಸಿಯಾ ರಸ್ತೆಯ ಹನುಮಾನ್‌ ಡೋಲ್‌ ಬಳಿ 21 ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್‌ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಾರ್ಮಿಕರು ಟ್ರ್ಯಾಕ್ಟರ್‌ ಮೂಲಕ ಬೇತುಲ್‌ ರೈಲು ನಿಲ್ದಾಣದಿಂದ ತಮ್ಮ ಹಳ್ಳಿಗಳಿಗೆ ವಾಪಸ್ಸಾಗುತ್ತಿದ್ದರು ಎಂದು ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಕಮಲಾ ಜೋಶಿ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟ್ರಕ್‌ ಡಿಕ್ಕಿ ಹೊಡೆದ ಪರಿಣಾಮ ಮೂರು ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದ ಬಳಿಕ ಟ್ರಕ್‌ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.