ಅಮರಾವತಿ: ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯಲ್ಲಿ ಖಾಸಗಿ ಬಸ್‌ವೊಂದು ಆಟೊಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಖಾಸಗಿ ಬಸ್ ಚಿತ್ತೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದಾಗ ಮತ್ತೊಂದು ಬಸ್ ಅನ್ನು ಓವರ್ ಟೆಕ್ ಮಾಡುವ ವೇಳೆ ಆಟೊಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಪೊಲೀಸ್ ಅಧಿಕಾರಿ ಕೃಷ್ಣ ಮೋಹನ್ ತಿಳಿಸಿದ್ದಾರೆ.
ಆಟೊದಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಾಯಗೊಂಡಿರುವ ಮತ್ತಿಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.