ADVERTISEMENT

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಐವರಿಂದ ಪ್ರಮಾಣವಚನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಫೆಬ್ರುವರಿ 2023, 5:43 IST
Last Updated 6 ಫೆಬ್ರುವರಿ 2023, 5:43 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಮೂವರು ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳು ಹಾಗೂ ಹೈಕೋರ್ಟ್‌ನ ಇಬ್ಬರು ಹಿರಿಯ ನ್ಯಾಯಮೂರ್ತಿಗಳು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.

ಸುಪ್ರೀಂ ಕೋರ್ಟ್‌ನ ನೂತನ ಕಟ್ಟಡದ ಸಭಾಂಗಣದಲ್ಲಿ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್‌ ಅವರು ಪ್ರಮಾಣ ವಚನ ಬೋಧಿಸಿದರು. ಐವರಿಂದ ಪ್ರಮಾಣವಚನ ಸ್ವೀಕರಿಸುವುದರೊಂದಿಗೆ ನ್ಯಾಯಮೂರ್ತಿಗಳ ಒಟ್ಟು ಸಂಖ್ಯೆ 32ಕ್ಕೆ ಏರಲಿದೆ. ಸುಪ್ರೀಂ ಕೋರ್ಟ್‌ನ ಮಂಜೂರಾಗಿರುವ ನ್ಯಾಯಮೂರ್ತಿಗಳ ಸ್ಥಾನ 34 ಆಗಿವೆ. ಇನ್ನು ಎರಡು ಹುದ್ದೆಗಳು ಬಾಕಿ ಇವೆ.

ಕೊಲಿಜಿಯಂ ಶಿಫಾರಸು: ಈ ಐವರು ನ್ಯಾಯಮೂರ್ತಿಗಳ ಹೆಸರನ್ನು ಸುಪ್ರೀಂ ಕೋರ್ಟ್‌ನ ಆರು ಸದಸ್ಯರ ಕೊಲಿಜಿಯಂ ಕಳೆದ ವರ್ಷ ಡಿಸೆಂಬರ್‌ 13ರಂದು ಶಿಫಾರಸು ಮಾಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.