ಅಹಮದಾಬಾದ್: ಸೂರತ್‌ನ ಸಚಿನ್ ಪ್ರದೇಶದಲ್ಲಿ ಶನಿವಾರ ಆರು ಅಂತಸ್ತಿನ ಕಟ್ಟಡ ಕುಸಿದಿದ್ದು, ಒಬ್ಬ ವ್ಯಕ್ತಿ ಸಾವಿಗೀಡಾಗಿದ್ದಾರೆ ಕನಿಷ್ಠ ನಾಲ್ಕು ಮಂದಿ ಕಟ್ಟಡದ ಒಳಗೆ ಸಿಲುಕಿರುವ ಅನುಮಾನ ವ್ಯಕ್ತವಾಗಿದೆ. ತಕ್ಷಣವೇ ಕಾರ್ಯಾಚರಣೆ ನಡೆಸಿ ಒಬ್ಬರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದರು.
‘30 ಫ್ಲ್ಯಾಟ್‌ಗಳನ್ನು ಹೊಂದಿದ 6 ಅಂತಸ್ತಿನ ಕಟ್ಟಡ ಕುಸಿದಿದೆ. ಕುಸಿಯುವ ವೇಳೆ 4ರಿಂದ 5 ಮಂದಿ ಕಟ್ಟಡದಲ್ಲಿ ಇದ್ದರು ಎಂದು ಹೇಳಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ’ ಎಂದು ಸೂರತ್ ಪೊಲೀಸ್ ಆಯುಕ್ತ ಅನುಪಮ್ ಸಿಂಗ್ ಗೆಹ್ಲೋತ್ ತಿಳಿಸಿದರು.
ಗಾರ್ಮೆಂಟ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಈ ಕಟ್ಟಡದಲ್ಲಿ ಬಾಡಿಗೆಗೆ ಪಡೆದು ವಾಸಿಸುತ್ತಿದ್ದರು. ಡಿಎನ್ ನಗರ್ ಸೊಸೈಟಿಗೆ ಸೇರಿದ್ದ ಕಟ್ಟಡವು ಇದಾಗಿದ್ದು, ಸಂಪೂರ್ಣವಾಗಿ ಹದಗೆಟ್ಟಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.