ತಿರುವನಂತಪುರಂ: ನೀಟ್ ಪರೀಕ್ಷೆ ವೇಳೆ ಬಲವಂತದಿಂದ ವಿದ್ಯಾರ್ಥಿನಿಯರ ಒಳ ಉಡುಪು (ಬ್ರಾ) ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿ ಐವರು ಮಹಿಳೆಯರನ್ನು ಬಂಧಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸುತ್ತಿರುವ ಪೊಲೀಸರು ಐವರು ಮಹಿಳಾ ಸಿಬ್ಬಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ ಮೂವರು ರಾಷ್ಟ್ರೀಯ ಪರೀಕ್ಷಾ ಆಯೋಗ(ಎನ್‌ಟಿಎ)ದ ಅಡಿ ನೇಮಕಗೊಂಡವರಾಗಿದ್ದಾರೆ. ಇನ್ನಿಬ್ಬರು ಕೊಲ್ಲಂನ ಅಯುರ್‌ನ ಖಾಸಗಿ ಶಿಕ್ಷಣ ಸಂಸ್ಥೆಗೆ ಸೇರಿದವರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ವಿದ್ಯಾರ್ಥಿನಿಯೊಬ್ಬರ ದೂರಿನ ಅನ್ವಯ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಘಟನೆಗೆ ಸಂಬಂಧಿಸಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೇಂದ್ರ ಶಿಕ್ಷಣ ಸಚಿವಾಲಯವು ಎನ್‌ಟಿಎ ಅಡಿ ಸತ್ಯ ಶೋಧನಾ ಸಮಿತಿಯನ್ನು ರಚನೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.