ಮುಂಬೈ: ಯುದ್ಧ ಪೀಡಿತ ಉಕ್ರೇನ್‌ನಿಂದ ರೊಮೇನಿಯಾಕ್ಕೆ ಸ್ಥಳಾಂತರಗೊಂಡಿದ್ದ 219 ಭಾರತೀಯರನ್ನು ಸರ್ಕಾರವು ಅಲ್ಲಿಂದ ತಾಯ್ನಾಡಿಗೆ ಯಶಸ್ವಿಯಾಗಿ ಕರೆತಂದಿದೆ.
ರೊಮೇನಿಯಾದ ರಾಜಧಾನಿ ಬುಕಾರೆಸ್ಟ್‌ನಿಂದ 219 ಭಾರತೀಯರನ್ನು ಹೊತ್ತ ಏರ್ ಇಂಡಿಯಾ ವಿಮಾನವು ಶನಿವಾರ ಸಂಜೆ ಮುಂಬೈಗೆ ಬಂದಿಳಿಯಿತು.
‘ಎಲ್ಲರಿಗೂ ಸ್ವಾಗತ. ‘ಆಪರೇಷನ್ ಗಂಗಾ’ದ ಮೊದಲ ಹೆಜ್ಜೆ’ ಎಂಬ ಹ್ಯಾಷ್‌ಟ್ಯಾಗ್‌ನೊಂದಿಗೆ ವಿದೇಶಾಂಗ ಸಚಿವ ಡಾ. ಎಸ್ ಜೈಶಂಕರ್ ಅವರು ಟ್ವಿಟರ್‌ನಲ್ಲಿ ಈ ಸಂಗತಿಯನ್ನು ಹಂಚಿಕೊಂಡಿದ್ದಾರೆ.
‘ಉಕ್ರೇನ್‌ನಿಂದ ಹಿಂದಿರುಗುವ ಎಲ್ಲಾ ವಿದ್ಯಾರ್ಥಿಗಳಿಗೆ ಬೃಹನ್‌ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಉಚಿತ ಸೇವೆಗಳನ್ನು ಒದಗಿಸುತ್ತದೆ. ನಾವು ಅವರಿಗೆ ಉಚಿತ ಕೋವಿಡ್ ಪರೀಕ್ಷೆ, ಲಸಿಕೆ, ಆಹಾರ ಮತ್ತು ಇತರ ಎಲ್ಲಾ ಸೌಲಭ್ಯಗಳನ್ನು ಒದಗಿಸುತ್ತೇವೆ’ ಎಂದು ಮೇಯರ್ ಕಿಶೋರಿ ಪೆಡ್ನೇಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.