ಶ್ರೀನಗರ: ಜಮ್ಮು ಕಾಶ್ಮೀರದ ದಕ್ಷಿಣ ಭಾಗದಲ್ಲಿ ಎರಡು ದಿನಗಳಿಂದ ಭಾರಿ ಮಳೆಯಾಗಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ.
ಮುನ್ನೆಚ್ಚರಿಕ ಕ್ರಮವಾಗಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಸಂಗಮ್ ಮತ್ತು ಶ್ರೀನಗರದಲ್ಲಿ ರಾಮ್ ಮುನ್ಷಿ ಬಾಗ್ ನದಿಗಳು ಶನಿವಾರ ಬೆಳಿಗ್ಗೆ ಅಪಾಯದ ಮಟ್ಟ ಮೀರಿಹರಿಯುತ್ತಿವೆ.
ಅನಂತನಾಗ್ ಜಿಲ್ಲೆಯ ನುನ್ವಾನ್–ಪಹಲ್ಗಾಂ ಹಾಗೂ ಗಂದೇರ್‌ಬಾಲ್ ಜಿಲ್ಲೆಯ ಬಲ್ಟಾಲ್ ಕಣಿವೆಯ ಮೇಲ್ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಅಮರನಾಥ ಯಾತ್ರೆಯನ್ನು ಎರಡು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ.
*
*
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.