ತಿರುವನಂತಪುರ: ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ್ದ ಕೇರಳಲ್ಲಿ ಗುರುವಾರ ಬಿಸಿಲು ಕಾಣಿಸಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟಣ ಗಣನೀಯವಾಗಿ ಕಡಿಮೆಯಾಗಿದೆ. ಸಂತ್ರಸ್ತರು ಪರಿಹಾರ ಶಿಬಿರಗಳಿಂದ ತಮ್ಮ ಮನೆಗಳಿಗೆ ವಾಪಸಾಗುತ್ತಿದ್ದಾರೆ.
ರಾಜ್ಯದಲ್ಲಿ ಮಳೆ ಸಂಬಂಧಿ ಅವಘಡಗಳಿಂದ ಮೃತಪಟ್ಟವರ ಸಂಖ್ಯೆ 104ಕ್ಕೆ ಏರಿಕೆಯಾಗಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ.
ಮಳೆ ಪ್ರಮಾಣ ಕಡಿಮೆಯಾಗಿದ್ದು,14 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ತೆಗೆಯಲಾಗಿದೆ. ಆದರೆ ಕಣ್ಣೂರು, ಕಾಸರಗೋಡು, ಇಡುಕ್ಕಿ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕವಳಪ್ಪಾರ ಹಾಗೂ ಪುತ್ತಮಲದಲ್ಲಿ ನಾಪತ್ತೆಯಾದವರ ಶೋಧ ಕಾರ್ಯ ಮುಂದುವರಿದಿದೆ. ಡ್ರೋನ್, ಶ್ವಾನದಳ ಹಾಗೂ ಆಧುನಿಕ ಉಪಕರಣಗಳನ್ನು ಬಳಸಲಾಗಿದೆ.
ಸಂತ್ರಸ್ತರು ವಾಪಸ್: ಪ್ರವಾಹ ಸಂತ್ರಸ್ತರು ನಿಧಾನವಾಗಿ ತಮ್ಮ ಮನೆಗಳಿಗೆ ತೆರಳುತ್ತಿದ್ದಾರೆ. ಆದರೂ 1057 ಪರಿಹಾರ ಕೇಂದ್ರಗಳಲ್ಲಿ 1.75 ಲಕ್ಷ ಮಂದಿ ಆಶ್ರಯ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.