ಇಟಾನಗರ: ಅರುಣಾಚಲ ಪ್ರದೇಶದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದ ಸ್ಥಿತಿ ಮುಂದುವರಿದಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದಾಗಿ 61,948 ಮಂದಿ ತೊಂದರೆಗೆ ಸಿಲುಕಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಮ್ಸಾಯಿ, ಲೋಹಿತ್, ಚಾಂಗ್‌ಲಾಂಗ್ ಹಾಗೂ ಪೂರ್ವ ಸಿಯಾಂಗ್ ಜಿಲ್ಲೆಗಳಲ್ಲಿ ತೀವ್ರ ಪ್ರವಾಹದ ಸ್ಥಿತಿ ಉಂಟಾಗಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಪುಮ್ ಪಾರೆ ಜಿಲ್ಲೆಯಲ್ಲಿ ಮೇಘಸ್ಫೋಟದಿಂದಾಗಿ ಪಾರೆ ಜಲವಿದ್ಯುತ್ ಯೋಜನೆಯಿಂದ (ಪಿಎಚ್‌ಇಪಿ) ಅಪಾರ ಪ್ರಮಾಣದ ನೀರನ್ನು ಬಿಡುಗಡೆಗೊಳಿಸಲಾಯಿತು.
ಜಲಾವೃತ ಪ್ರದೇಶಗಳಿಂದ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ನಮ್ಸಾಯಿ, ವಾಕ್ರೋದಲ್ಲಿ ಈವರೆಗೆ 34 ಗ್ರಾಮಗಳು ಪ್ರವಾಹಕ್ಕೆ ಸಿಲುಕಿವೆ ಎಂದು ವರದಿ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.