ADVERTISEMENT

ಮೇವು ಹಗರಣ: ರಾಂಚಿ ಸಿಬಿಐ ಕೋರ್ಟ್‌ಗೆ ಶರಣಾದ ಲಾಲೂ ಪ್ರಸಾದ್‌ ಯಾದವ್‌

ಏಜೆನ್ಸೀಸ್
Published 30 ಆಗಸ್ಟ್ 2018, 11:22 IST
Last Updated 30 ಆಗಸ್ಟ್ 2018, 11:22 IST
ಲಾಲೂ ಪ್ರಸಾದ್‌ ಯಾದವ್‌
ಲಾಲೂ ಪ್ರಸಾದ್‌ ಯಾದವ್‌   

ರಾಂಚಿ: ಅನಾರೋಗ್ಯದಿಂದ ಬಳಲುತ್ತಿದ್ದು, ಜಾಮೀನಿನ ಮೇಲೆ ಹೊರ ಬಂದಿದ್ದ ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್‌ ಯಾದವ್‌ ಅವರು ಗುರುವಾರ ರಾಂಚಿಯಸಿಬಿಐ ವಿಶೇಷ ನ್ಯಾಯಾಲಯಕ್ಕೆ ಶರಣಾದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು ಅವರು, ‘ನಾನು ನ್ಯಾಯಾಲಯದ ಆದೇಶವನ್ನು ಪಾಲಿಸುತ್ತೇನೆ. ಸದ್ಯ ನಾನು ಅಸ್ವಸ್ಥನಾಗಿದ್ದೇನೆ. ಆದರೂ ಕೋರ್ಟ್‌ಗೆ ಶರಣಾಗುತ್ತಿದ್ದೇನೆ’ ಎಂದು ಹೇಳಿದರು.

ಮುಂಬೈಯ ಆಸ್ಪತ್ರೆಯೊಂದರಲ್ಲಿ ಲಾಲೂ ಪ್ರಸಾದ್‌ಚಿಕಿತ್ಸೆ ಪಡೆಯುತ್ತಿದ್ದರು.ಜಾಮೀನು ಅವಧಿಯನ್ನು, ಚಿಕಿತ್ಸೆ ಹಿನ್ನಲೆಯಲ್ಲಿ ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸುವಂತೆ ಕೋರಿ ಅವರ ಪರ ವಕೀಲರು ಜಾರ್ಖಂಡ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ADVERTISEMENT

ವಿಚಾರಣೆ ನಡೆಸಿದ ಜಾರ್ಖಂಡ್‌ ಹೈಕೋರ್ಟ್‌, ಜಾಮೀನು ಅರ್ಜಿಯನ್ನು ತಿರಸ್ಕರಿಸಿ ಆಗಸ್ಟ್‌ 30ರ ಒಳಗಾಗಿ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯ, ರಾಂಚಿಯಲ್ಲಿರುವ ರಾಜೇಂದ್ರ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌(ರಿಮ್ಸ್‌) ಆಸ್ಪತ್ರೆಯಲ್ಲಿಯೇ ಲಾಲೂ ಚಿಕಿತ್ಸೆ ಪಡೆಯಲಿ ಎಂದು ಸೂಚಿಸಿದೆ.

ಲಾಲೂ ಪ್ರಸಾದ್‌ ಯಾದವ್‌ ಮೇವು ಹಗರಣ ಸೇರಿ ಹಲವು ಪ್ರಕರಣಗಳಲ್ಲಿ ದೋಷಿಯಾಗಿದ್ದು, ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅನಾರೋಗ್ಯ ಬಳಲುತ್ತಿರುವ ಅವರಿಗೆ ಮೇ ತಿಂಗಳಲ್ಲಿ ಜಾಮೀನು ದೊರೆತಿತ್ತು.

*

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.