ADVERTISEMENT

ನೀಟ್‌ ಹಗರಣಕ್ಕೆ ಮೋದಿ ಸರ್ಕಾರವೇ ಹೊಣೆ: ಖರ್ಗೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2024, 16:09 IST
Last Updated 23 ಜೂನ್ 2024, 16:09 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ನೀಟ್‌–ಯುಜಿ ಅಕ್ರಮ ಸಂಬಂಧ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯಲ್ಲಿ ಅಧಿಕಾರಿಗಳ ಬದಲಾವಣೆ ಮಾಡಿರುವುದಕ್ಕೆ ಮೋದಿ ಸರ್ಕಾರವನ್ನು ಟೀಕಿಸಿರುವ ಕಾಂಗ್ರೆಸ್ ಹಗರಣದ ಅಂತಿಮ ಹೊಣೆಗಾರಿಕೆ ಕೇಂದ್ರ ಸರ್ಕಾರದ್ದು ಎಂದು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಹೇಳಿದ್ದಾರೆ.

‘ಬಿಜೆಪಿಯು ದೇಶದ ಶಿಕ್ಷಣ ವ್ಯವಸ್ಥೆಯನ್ನು ಕುಲಗೆಡಿಸಿದ್ದು ಇಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳಿಗೆ ಅಧಿಕಾರಿಗಳ ಬದಲಾವಣೆಯಿಂದ ಪರಿಹಾರ ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.  ವಿದ್ಯಾರ್ಥಿಗಳಿಗೆ ನ್ಯಾಯ ಸಿಗಬೇಕಾದರೆ ಮೋದಿ ಸರ್ಕಾರವನ್ನು ಹೊಣೆ ಮಾಡಬೇಕು ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಶನಿವಾರ ಎನ್‌ಟಿಎ ವ್ಯವಸ್ಥಾಪಕ ನಿರ್ದೇಶಕ ಸುಬೋಧ್‌ ಸಿಂಗ್‌ ಅವರನ್ನು ಹುದ್ದೆಯಿಂದ ತೆರವುಗೊಳಿಸಿತ್ತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.