ADVERTISEMENT

ಕಾನೂನು ಆಯೋಗದ ಮುಖ್ಯಸ್ಥರಾಗಿ ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಸಿಜೆ ಅವಸ್ತಿ ನೇಮಕ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2022, 10:23 IST
Last Updated 8 ನವೆಂಬರ್ 2022, 10:23 IST
   

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಧೀಶರಾದ ರಿತುರಾಜ್‌ ಅವಸ್ತಿಯವರನ್ನು ಕಾನೂನು ಆಯೋಗದ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಹೇಳಿದ್ದಾರೆ

ಇವರ ಜತೆ, ನ್ಯಾ. ಕೆ.ಟಿ ಶಂಕರನ್, ಪ್ರೊ. ಆನಂದ್‌ ಪಲಿವಾಲ್‌, ಪ್ರೊ. ಡಿ.ಪಿ ವರ್ಮಾ, ಪ್ರೋ. ರಕ ಆರ್ಯ ಹಾಗೂ ಎಂ. ಕರುಣಾನಿಧಿಯವರನ್ನು ಆಯೋಗದ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ ಎಂದು ರಿಜಿಜು ಮಾಹಿತಿ ನೀಡಿದ್ದಾರೆ.

ಸುಮಾರು ನಾಲ್ಕು ವರ್ಷಗಳ ಬಳಿಕ ಕಾನೂನು ಆಯೋಗವನ್ನು ಮತ್ತೆ ರಚಿಸಲಾಗಿದೆ.

ADVERTISEMENT

ರಿತುರಾಜ್‌ ಅವಸ್ತಿಯವರು ಕರ್ನಾಟಕ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. ಜುಲೈ 2, 2022ರಂದು ನಿವೃತ್ತರಾಗಿದ್ದರು.

ತಮ್ಮ ಅಧಿಕಾರವಧಿ ವೇಳೆ ವಿದ್ಯಾಸಂಸ್ಥೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುವುದನ್ನು ನಿಷೇಧಿಸಿ ತೀರ್ಪು ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.