ಗುವಾಹಟಿ: ಅಸ್ಸಾಂನ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್(86 ವರ್ಷ) ಅವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕೋವಿಡ್ –19ಕ್ಕೆೆ ತುತ್ತಾಗಿದ್ದ ಅವರು ಕೆಲವು ದಿನಗಳ ಹಿಂದಷ್ಟೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ನವೆಂಬರ್ 2ರಂದು ಅವರ ಆರೋಗ್ಯಸ್ಥಿತಿ ಹದಗೆಟ್ಟಿದ್ದರಿಂದ ಗುವಾಹಟಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ತುರ್ತು ನಿಗಾ ಘಟಕದಲ್ಲಿ ವೆಂಟಿಲೇಟರ್ ನೆರವಿನಿಂದ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಆರೋಗ್ಯ ಅಧೀಕ್ಷಕ ಅಭಿಜಿತ್ ಶರ್ಮ ತಿಳಿಸಿದ್ದಾರೆ.
ಬಹು ಅಂಗಾಗಳು ವೈಫಲ್ಯಗೊಂಡಿದ್ದು ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.