ನಾಸಿಕ್: ಮಹಾರಾಷ್ಟ್ರ ಬಿಜೆಪಿಯ ಮಾಜಿ ಸಂಸದ ಹಾಗೂ ಮಾಜಿ ಶಾಸಕ ಹರಿಶ್ಚಂದ್ರ ಚವಾಣ್ ಗುರುವಾರ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
ದೀರ್ಘಕಾಲೀನ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಾಸಿಕ್ ನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ, ಪುತ್ರ ಹಾಗೂ ಮಗಳನ್ನು ಅಗಲಿದ್ದಾರೆ.
ಹರಿಶ್ಚಂದ್ರ ಚವಾಣ್ ನಿಧನಕ್ಕೆ ಬಿಜೆಪಿ ನಾಯಕರು, ವಿವಿಧ ಪಕ್ಷಗಳ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಚವಾಣ್ ಅವರು 2004ರಲ್ಲಿ ಮಾಲೇಗಾಂವ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಗೆಲುವು ದಾಖಲಿಸಿದ್ದರು. 2009 ಮತ್ತು 2014ರಲ್ಲಿ ದಿಂಡೋರಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಾಸಕರಾಗಿ ಗೆದ್ದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.