ADVERTISEMENT

ಟಿಆರ್‌ಪಿ ಹಗರಣ: ಬಾರ್ಕ್‌ ಮಾಜಿ ಸಿಇಒ ಬಂಧನ

ಪಿಟಿಐ
Published 24 ಡಿಸೆಂಬರ್ 2020, 19:57 IST
Last Updated 24 ಡಿಸೆಂಬರ್ 2020, 19:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ನಕಲಿ ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌(ಟಿಆರ್‌ಪಿ) ಹಗರಣಕ್ಕೆ ಸಂಬಂಧಿಸಿದಂತೆ ಬ್ರಾಡ್‌ಕಾಸ್ಟ್‌ ಆಡಿಯನ್ಸ್‌ ರಿಸರ್ಚ್‌ ಕೌನ್ಸಿಲ್‌(ಬಿಎಆರ್‌ಸಿ) ಮಾಜಿ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಯನ್ನು(ಸಿಇಒ) ಮುಂಬೈ ಪೊಲೀಸ್‌ ಅಪರಾಧ ವಿಭಾಗವು ಗುರುವಾರ ಬಂಧಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿಯವರೆಗೂ 15 ಜನರನ್ನು ಬಂಧಿಸಲಾಗಿದ್ದು, ಪರ್ಥೊ ದಾಸ್‌ಗುಪ್ತಾ ಅವರನ್ನು ಶುಕ್ರವಾರ ನ್ಯಾಯಾಲಯಕ್ಕೆ ಹಾಜರುಪ‍ಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಬಾರ್ಕ್‌ನ ಮಾಜಿ ಮುಖ್ಯ ನಿರ್ವಹಣಾ ಅಧಿಕಾರಿ(ಸಿಒಒ) ರಾಮಿಲ್‌ ರಾಮ್‌ಗಾರಿಯಾ ಅವರನ್ನು ಬಂಧಿಸಲಾಗಿತ್ತು. ಕೆಲ ಚಾನೆಲ್‌ಗಳು ಟಿಆರ್‌ಪಿಯನ್ನು ತಿರುಚುತ್ತಿದೆ ಎಂದು ಬಾರ್ಕ್‌ ದೂರು ನೀಡಿದ ಬಳಿಕ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT