ADVERTISEMENT

ಜಾರ್ಖಂಡ್ ಚುನಾವಣೆ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಮನಶ್‌ ಸಿನ್ಹಾ

ಪಿಟಿಐ
Published 28 ಅಕ್ಟೋಬರ್ 2024, 6:25 IST
Last Updated 28 ಅಕ್ಟೋಬರ್ 2024, 6:25 IST
ಬಿಜೆಪಿ ಧ್ವಜ
ಬಿಜೆಪಿ ಧ್ವಜ   

ರಾಂಚಿ: ಜಾರ್ಖಂಡ್‌ ಕಾಂಗ್ರೆಸ್‌ನ ಮಾಜಿ ಕಾರ್ಯಾಧ್ಯಕ್ಷ ಮನಶ್‌ ಸಿನ್ಹಾ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಬಿಜೆಪಿ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮನಶ್‌ ಸಿಂಗ್ ಅವರನ್ನು ಜಾರ್ಖಂಡ್ ಬಿಜೆಪಿ ಕಾರ್ಯಾಧ್ಯಕ್ಷ ರವೀಂದ್ರ ರೈ ಮತ್ತು ಜಾರ್ಖಂಡ್ ವಿಧಾನಸಭೆಗೆ ಬಿಜೆಪಿಯ ಸಹ ಉಸ್ತುವಾರಿಯೂ ಆಗಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಪಕ್ಷಕ್ಕೆ ಸ್ವಾಗತಿಸಿದರು.

‘ಕಳೆದ 27 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕೆ ಸೇವೆ ಸಲ್ಲಿಸಿದ್ದೇನೆ. ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಆದರೆ, ನಮ್ಮಂತಹ ಕಾರ್ಯಕರ್ತರಿಗೆ ಪಕ್ಷದಲ್ಲಿ ಯಾವುದೇ ಗೌರವ ಉಳಿದಿಲ್ಲ. ಹೀಗಾಗಿ, ನಾನು ಬಿಜೆಪಿಗೆ ಸೇರಲು ನಿರ್ಧರಿಸಿದೆ’ ಎಂದು ಸಿನ್ಹಾ ಹೇಳಿದರು.

ADVERTISEMENT

ಇದೇ ವೇಳೆ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ, ‘ಪಕ್ಷಕ್ಕೆ ಹಣಕಾಸಿನ ನೆರವು ನೀಡುವವರಿಗೆ, ಪ್ರತಿಷ್ಠಿತ ಕುಟುಂಬಗಳಿಗೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ನಿಂದಿಸುವವರಿಗೆ ಮಾತ್ರ ಕಾಂಗ್ರೆಸ್ ಟಿಕೆಟ್ ನೀಡುತ್ತದೆ’ ಎಂದು ಆರೋಪಿಸಿದರು.

81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನ.23ಕ್ಕೆ ಮತ ಎಣಿಕೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.