ADVERTISEMENT

ಚರ್ಚೆಯಲ್ಲಿ ಪಾಲ್ಗೊಳ್ಳಲು ಮೋದಿ– ರಾಹುಲ್‌ಗೆ ಮಾಜಿ ನ್ಯಾಯಮೂರ್ತಿಗಳ ಆಹ್ವಾನ

ಪಿಟಿಐ
Published 9 ಮೇ 2024, 16:08 IST
Last Updated 9 ಮೇ 2024, 16:08 IST
<div class="paragraphs"><p>ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ&nbsp;ಪ್ರಧಾನಿ ನರೇಂದ್ರ ಮೋದಿ</p></div>

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರಗಳು

ನವದೆಹಲಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕ ಚರ್ಚೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಆಹ್ವಾನಿಸಿ ಹಿರಿಯ ಪತ್ರಕರ್ತ ಮತ್ತು ಇಬ್ಬರು ಮಾಜಿ ನ್ಯಾಯಮೂರ್ತಿಗಳು ಪತ್ರ ಬರೆದಿದ್ದಾರೆ.

ADVERTISEMENT

‘ದಿ ಹಿಂದೂ’ ಪತ್ರಿಕೆಯ ಮಾಜಿ ಸಂಪಾದಕ ಎನ್‌. ರಾಮ್‌, ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಮದನ್‌ ಲೋಕೊರ್‌ ಮತ್ತು ದೆಹಲಿ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ ಎ.ಪಿ.ಶಾ ಅವರು ಈ ಕುರಿತು ಪತ್ರ ಬರೆದಿದ್ದಾರೆ.

ವಾಣಿಜ್ಯೇತರ ಮತ್ತು ಪಕ್ಷಾತೀತ ವೇದಿಕೆಯಲ್ಲಿ ಸಾರ್ವಜನಿಕ ಚರ್ಚೆಯಲ್ಲಿ ಪಾಲ್ಗೊಳ್ಳುವಂತೆ ಅವರು ಉಭಯ ನಾಯಕರನ್ನು ಅವರು ಒತ್ತಾಯಿಸಿದ್ದಾರೆ. ಒಂದು ವೇಳೆ ಭಾಗವಹಿಸಲು ಸಾಧ್ಯವಾಗದಿದ್ದರೆ, ಚರ್ಚೆಗೆ ತಮ್ಮ ಪ್ರತಿನಿಧಿಯನ್ನು ನಾಮನಿರ್ದೇಶನ ಮಾಡುವಂತೆ ಅವರು ಆಗ್ರಹಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.