ಚಂಡೀಗಢ: ಹರಿಯಾಣದ ಮಾಜಿ ಸಚಿವೆ ಸಾವಿತ್ರಿ ಜಿಂದಾಲ್ ಅವರು ಕಾಂಗ್ರೆಸ್ ತೊರೆದು ಗುರುವಾರ ಬಿಜೆಪಿಗೆ ಸೇರ್ಪಡೆಗೊಂಡರು.
ಇತ್ತಿಚೆಗಷ್ಟೆ ಸಾವಿತ್ರಿ ಅವರ ಪುತ್ರ, ಉದ್ಯಮಿ ನವೀನ್ ಜಿಂದಾಲ್ ಅವರು ಕೂಡ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರಿದ್ದರು.
ಹಿಸ್ಸಾರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾವಿತ್ರಿ ಅವರು ಬಿಜೆಪಿಗೆ ಸೇರಿದ್ದಾರೆ. ಈ ವೇಳೆ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ, ಮಾಜಿ ಮುಖ್ಯಮಂತ್ರಿ ಮನೋಹರ್‌ಲಾಲ್ ಖಟ್ಟರ್ ಸೇರಿದಂತೆ ಇತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
ಸಾವಿತ್ರಿ ಜಿಂದಾಲ್ ಅವರು ಈ ವರ್ಷದ ಫೋರ್ಬ್ಸ್‌ನ ಪಟ್ಟಿಯಲ್ಲಿ ದೇಶದ ಶ್ರೀಮಂತ ಮಹಿಳೆ ಎನ್ನುವ ಸ್ಥಾನ ಪಡೆದಿದ್ದರು. ಅವರ ಆಸ್ತಿಯ ನಿವ್ವಳ ಮೊತ್ತ 29.1 ಬಿಲಿಯನ್ ಅಮೆರಿಕನ್ ಡಾಲರ್ ಎಂದು ಹೇಳಲಾಗಿದೆ.
ಈ ಹಿಂದೆ ಕಾಂಗ್ರೆಸ್‌ನ ಭೂಪಿಂದರ್ ಸಿಂಗ್ ಹೂಡಾ ಸರ್ಕಾರದಲ್ಲಿ ಸಾವಿತ್ರಿ ಅವರು ಸಚಿವೆಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.