ನವದೆಹಲಿ: ಹರಿಯಾಣ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ, ಯುವ ಕಾಂಗ್ರೆಸ್‌ನ ರಾಷ್ಟ್ರ ಘಟಕದ ಮಾಜಿ ಅಧ್ಯಕ್ಷರೂ ಆದ ಅಶೋಕ್ ತನ್ವರ್ ಸೋಮವಾರ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ರ ಕೇಜ್ರಿವಾಲ್ ಅವರ ಸಮ್ಮುಖದಲ್ಲಿ ಎಎಪಿ ಸೇರ್ಪಡೆಯಾಗಿದ್ದಾರೆ.
ಹರಿಯಾಣದ ಸಿರ್ಸಾ ಲೋಕಸಭೆ ಕ್ಷೇತ್ರದ ಮಾಜಿ ಸಂಸದರೂ ಆಗಿರುವ ತನ್ವರ್ 2019ರಲ್ಲಿ ಕಾಂಗ್ರೆಸ್ ತೊರೆದಿದ್ದರು.
ತನ್ವರ್ ಅವರು ಹರಿಯಾಣ ಪ್ರದೇಶ ಕಾಂಗ್ರೆಸ್ ಘಟಕದ (ಎಚ್‌ಪಿಸಿಸಿ) ಅಧ್ಯಕ್ಷರಾಗಿ, ಯುವ ಕಾಂಗ್ರೆಸ್ ಮತ್ತು ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐನ ರಾಷ್ಟ್ರ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್‌ನಲ್ಲಿ ಕೆಲಸ ಮಾಡಿದ್ದರು.
ಅಶೋಕ್ ತನ್ವರ್ ಅವರ ಎಎಪಿ ಸೇರ್ಪಡೆ ವಿಚಾರವು ಸೋಮವಾರ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಕೂಡ ಆಗಿತ್ತು.
ಈಗಾಗಲೇ ನೆರೆಯ ಪಂಜಾಬ್‌ನಲ್ಲಿ ದಿಗ್ವಿಜಯ ಸಾಧಿಸಿರುವ ಎಎಪಿಗೆ, ಅಶೋಕ್ ತನ್ವರ್ ಅವರ ಸೇರ್ಪಡೆಯು ಹೆಚ್ಚಿನ ಬಲ ತಂದುಕೊಟ್ಟಂತಾಗಿದೆ. ಇತ್ತೀಚೆಗೆ, ಹರಿಯಾಣದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಇತರ ಪಕ್ಷಗಳ ಹಲವು ನಾಯಕರು ಎಎಪಿಗೆ ಹೆಚ್ಚಾಗಿ ಸೇರುತ್ತಿದ್ದಾರೆ.
ಹರಿಯಾಣ ವಿಧಾನಸಭೆಗೆ 2024ರಲ್ಲಿ ಚುನಾವಣೆಗಳು ನಡೆಯಲಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.