ರಾಂಚಿ: ಜೈಲಿನಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಪತ್ನಿ ಕಲ್ಪನಾ ಗಾಂಡೇಯ್ ಕ್ಷೇತ್ರದಿಂದ ವಿಧಾನಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಮ್‌ಎಮ್) ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂದು ಪಕ್ಷ ಘೋಷಿಸಿದೆ.
ಗಿರಿಡೀಹ್ ಜಿಲ್ಲೆಯಲ್ಲಿನ ಈ ಕ್ಷೇತ್ರದ ಶಾಸಕ ಸ್ಥಾನವು ಜೆಎಂಎಂ ಶಾಸಕ ಸರ್ಫರಾಜ್ ಅಹಮದ್ ಅವರ ರಾಜೀನಾಮೆಯಿಂದಾಗಿ ತೆರವಾಗಿತ್ತು. ಈ ಕ್ಷೇತ್ರದಲ್ಲಿ ಮೇ 20ರಂದು ಉಪ ಚುನಾವಣೆ ನಡೆಯಲಿದೆ.
ಎಂ.ಟೆಕ್ ಮತ್ತು ಎಂಬಿಎ ಪದವೀಧರೆಯಾಗಿರುವ ಕಲ್ಪನಾ ಅವರ ರಾಜಕೀಯ ಪಯಣ ಮಾರ್ಚ್ 4ರಂದು ನಡೆದ ಜೆಎಂಎಂ ಪಕ್ಷದ ಸ್ಥಾಪನಾ ದಿನದ ಕಾರ್ಯಕ್ರಮದಂದು ಆರಂಭವಾಯಿತು. ಈ ವೇಳೆ ಮಾತನಾಡಿದ್ದ ಅವರು, ‘2019 ರಲ್ಲಿ ಹೇಮಂತ್ ಸೋರೆನ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿರೋಧಿಗಳು ಸಂಚು ರೂಪಿಸಿ ನನ್ನ ಪತಿಯನ್ನು ಕಂಬಿ ಹಿಂದೆ ಕಳುಹಿಸಿದ್ದಾರೆ. ಅವರಿಗೆ ತಕ್ಕ ಉತ್ತರ ನೀಡುತ್ತೇನೆ’ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.