ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ, ರಾಷ್ಟ್ರಪತಿ ಚುನಾವಣೆಗೆ ಜಾರ್ಖಂಡ್‌ನ ಮಾಜಿ ರಾಜ್ಯಪಾಲೆಮತ್ತು ಬುಡಕಟ್ಟು ಸಮುದಾಯದ ನಾಯಕಿ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸುತ್ತಿರುವುದಾಗಿ ನಡ್ಡಾ ಹೇಳಿದರು.
ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ದೃಷ್ಟಿಯಿಂದ ಸಂಜೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸದೀಯ ಮಂಡಳಿ ಸಭೆ ನಡೆಯಿತು. ಸಭೆ ಬಳಿಕ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ಧಾರವನ್ನು ಪ್ರಕಟಿಸಿದರು.
ವಿಪಕ್ಷಗಳು ತಮ್ಮ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರ ಹೆಸರನ್ನು ಘೋಷಿಸಿವೆ.
ಜುಲೈ 18ರಂದು ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.