ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾಂಗ್ರೆಸ್ ಹಿರಿಯ ನಾಯಕ ಚಾಂಡಿ ಅವರಿಗೆ ಭಾನುವಾರ ರಾತ್ರಿ ತೀವ್ರ ಜ್ಷರ ಕಾಣಿಸಿಕೊಂಡಿತ್ತು. ಅವರನ್ನು ನಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಚಾಂಡಿ ಅವರಿಗೆ ನ್ಯುಮೋನಿಯಾ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಅವರಿಗೆ 79 ವರ್ಷ ವಯಸ್ಸು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.