ನವದೆಹಲಿ: ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಲೋಕಸಭೆಯ ಮಾಜಿ ಸ್ಪೀಕರ್, ಕಾಂಗ್ರೆಸ್ ನಾಯಕಿ ಮೀರಾ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಸಂಸ್ಥೆ ‘ಎಎನ್‌ಐ’ ಜೊತೆ ಮಾತನಾಡಿರುವ ಅವರು, ‘ಸಂಸತ್‌ನಲ್ಲಿ ಭದ್ರತಾ ಲೋಪ ಆಗಿರುವುದು ಗಂಭೀರ ಘಟನೆಯಾಗಿದೆ. ಇದಕ್ಕೆ ಕಾರಣವಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಆದರೆ, ಇದುವರೆಗೆ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಯಾಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ’ ಎಂದು ಹೇಳಿದ್ದಾರೆ.
ಡಿ. 13ರಂದು ಸಂಸತ್ತಿನಲ್ಲಿ ನಡೆದ ಭದ್ರತಾ ಲೋಪ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಕಲಾಪಕ್ಕೆ ಅಡ್ಡಿಪಡಿಸಿದ್ದರು.
ಈ ಹಿನ್ನೆಲೆಯಲ್ಲಿ ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು 146 ಸಂಸದರನ್ನು ಅಮಾನತು ಮಾಡಿದ್ದರು. ಸ್ಪೀಕರ್ ಕ್ರಮ ಖಂಡಿಸಿ ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.