ನವದೆಹಲಿ: ಪೆಟ್ರೋಲಿಯಂ ಇಲಾಖೆಯ ಮಾಜಿ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ತರುಣ್ ಕಪೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ಸೋಮವಾರ ನೇಮಿಸಲಾಗಿದೆ.
ಈ ಬಗ್ಗೆ ಕೇಂದ್ರದ ಕ್ಯಾಬಿನೆಟ್ ನೇಮಕಾತಿ ಸಮಿತಿ ಸೋಮವಾರ ಅಧಿಕೃತ ಮಾಹಿತಿ ನೀಡಿದೆ.
ಹಿಮಾಚಲ ಪ್ರದೇಶದ 1987ರ ಬ್ಯಾಚ್‌ನ ಐಎಎಸ್ ಅಧಿಕಾರಿ ತರುಣ್ ಕಪೂರ್ ಅವರನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಭಾರತ ಸರ್ಕಾರದ ಕಾರ್ಯದರ್ಶಿ ಹಂತದ ಸ್ಥಾನಮಾನಗಳನ್ನು ಕಪೂರ್ ಅವರಿಗೆ ನೀಡಲಾಗುತ್ತದೆ.
ಐಎಎಸ್ ಅಧಿಕಾರಿಗಳಾದ ಹರಿರಂಜನ್ ರಾವ್ ಮತ್ತು ಅತಿಶ್ ಚಂದ್ರ ಅವರನ್ನು ಪ್ರಧಾನಮಂತ್ರಿ ಕಚೇರಿಯ ಹೆಚ್ಚುವರಿ ಕಾರ್ಯದರ್ಶಿಗಳನ್ನಾಗಿ ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.