ನವದೆಹಲಿ: ಮಾಜಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಗೆ ಕೇಂದ್ರ ಸರ್ಕಾರ ‘ಝಡ್ ಪ್ಲಸ್’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಕೋವಿಂದ್ ಅವರು ಪ್ರಯಾಣಿಸುವವೇಳೆ ಶಸ್ತ್ರ ಸಜ್ಜಿತ ಬೆಂಗಾವಲು ಪಡೆ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಭದ್ರತೆ ಒದಗಿಸಲಿದೆ.ಕೇಂದ್ರೀಯ ಗುಪ್ತಚರ ಇಲಾಖೆ ಸಲಹೆಯ ಮೇರೆಗೆ ಕೇಂದ್ರ ಗೃಹ ಸಚಿವಾಲಯ ಝಡ್ ಪ್ಲಸ್ ಶ್ರೇಣಿಯ ಭದ್ರತೆಗೆ ಅನುಮೋದನೆ ನೀಡಿದೆ. ಸೆಪ್ಟೆಂಬರ್ 5ರಿಂದಲೇಯೋಧರು ಕೋವಿಂದ್ ಅವರ ಭದ್ರತೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ದೆಹಲಿಯ ಜನಪಥ್ ರಸ್ತೆಯಲ್ಲಿರುವಕೋವಿಂದ್ ಅವರ ನಿವಾಸಕ್ಕೂ ಭದ್ರತೆ ಒದಗಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.