ಲಖನೌ: ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಕಲ್ಯಾಣ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (ಎಸ್‌ಜಿಪಿಜಿಐ) ಇಲ್ಲಿ ಹೇಳಿಕೆಯಲ್ಲಿ ತಿಳಿಸಿದೆ.
ಕಲ್ಯಾಣ್ ಸಿಂಗ್ ಅವರಿಗೆ 89 ವರ್ಷ ವಯಸ್ಸಾಗಿತ್ತು.
ಜುಲೈ 4ರಂದು ಸಿಂಗ್ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.
ಡಿಸೆಂಬರ್ 6, 1992ರಂದು ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿಯನ್ನು ಧ್ವಂಸಗೊಳಿಸಿದಾಗ ಕಲ್ಯಾಣ್ ಸಿಂಗ್ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.
ನಂತರ ಅವರು ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.