ಹೈದರಾಬಾದ್: ಲೋಕಸಭಾ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದೆ. ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು , ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ , ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಚಿತ್ರ ನಟರಾದ ಚಿರಂಜೀವಿ, ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್‌ಟಿಆರ್ ಸೇರಿದಂತೆ ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು.
ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಬಂಡಿ ಸಂಜಯ್ ಕುಮಾರ್ ಮತ್ತು ಪಕ್ಷದ ಹೈದರಾಬಾದ್ ಲೋಕಸಭಾ ಅಭ್ಯರ್ಥಿ ಕೆ.ಮಾಧವಿ ಲತಾ ಕೂಡ ಮತ ಚಲಾಯಿಸಿದರು.
ರಾಜ್ಯದ 17 ಲೋಕಸಭಾ ಸ್ಥಾನಗಳಿಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆಗೆ ಮುಕ್ತಾಯಗೊಳ್ಳಲಿದೆ.
ಮತ ಚಲಾಯಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಿಶನ್ ರೆಡ್ಡಿ , 'ಕೆಲವು ಹಿರಿಯ ನಾಗರಿಕರು ಸೇರಿದಂತೆ ಹಲವಾರು ಮತದಾರರು ತಮ್ಮ ಹಕ್ಕು ಚಲಾಯಿಸಿದರು. ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಲು ಬರುತ್ತಿದ್ದಾರೆ. ಪ್ರಜಾಪ್ರಭುತ್ವ ಮತ್ತು ದೇಶದ ಭದ್ರತೆಗಾಗಿ ತಮ್ಮ ಹಕ್ಕು ಚಲಾಯಿಸುವಂತೆ ನಾನು ಜನರನ್ನು ವಿನಂತಿಸುತ್ತೇನೆ' ಎಂದರು.
ಇನ್ನು ಆಂಧ್ರಪ್ರದೇಶ ರಾಜ್ಯಪಾಲ ಅಬ್ದುಲ್ ನಜೀರ್, ಪತ್ನಿ ಸಮೀರಾ ನಜೀರ್ ವಿಜಯವಾಡದಲ್ಲಿ ಮತದಾನ ಮಾಡಿದರು.
ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್ ಜಗನ್‌ಮೋಹನ್ ರೆಡ್ಡಿ ಕಡಪದ ಜಯಮಹಲ್ ಅಂಗನವಾಡಿಯಲ್ಲಿ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಗುಂಟೂರಿನಲ್ಲಿ ತಮ್ಮ ಹಕ್ಕು ಚಲಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.