ADVERTISEMENT

UP Election: ಕಾಂಗ್ರೆಸ್‌ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ, ಶೇ 40 ಮಹಿಳೆಯರು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 13 ಜನವರಿ 2022, 8:33 IST
Last Updated 13 ಜನವರಿ 2022, 8:33 IST
ಪ್ರಿಯಾಂಕಾ ಗಾಂಧಿ: ಪಿಟಿಐ ಚಿತ್ರ
ಪ್ರಿಯಾಂಕಾ ಗಾಂಧಿ: ಪಿಟಿಐ ಚಿತ್ರ   

ನವದೆಹಲಿ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಉನ್ನಾವೊ ಸಂತ್ರಸ್ತೆಯ ತಾಯಿಗೆ ಟಿಕೆಟ್ ನೀಡಿದೆ.

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಗುರುವಾರ 125 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿ ಬಿಡುಗಡೆ ಮಾಡಿದರು. ಅದರಲ್ಲಿ ಶೇಕಡ 40ರಷ್ಟು ಮಹಿಳೆಯರಿಗೆ ಹಾಗೂ ಶೇಕಡ 40ರಷ್ಟು ಯುವಜನತೆಗೆ ಅವಕಾಶ ನೀಡಿರುವುದಾಗಿ ತಿಳಿಸಿದರು.

125 ಸ್ಥಾನಗಳ ಪೈಕಿ ಮಹಿಳೆಯರಿಗೆ 50 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಅವಕಾಶ ಕೊಟ್ಟಿದೆ. ಸಂಘ ಸಂಸ್ಥೆಗಳಿಂದ ಹಿಡಿದು ಪತ್ರಕರ್ತರ ವರೆಗೂ, ಹೋರಾಟ ನಡೆಸುತ್ತಿರುವ ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ ಎಂದರು.

ADVERTISEMENT

2017ರ ಉನ್ನಾವೊ ಸಂತ್ರಸ್ತೆಯ ತಾಯಿ ಆಶಾ ದೇವಿ ಅವರಿಗೆ ಟಿಕೆಟ್ ನೀಡಲಾಗಿದೆ. ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಿಸಲು ನಡೆದ ಹೋರಾಟದ ನೇತೃತ್ವ ವಹಿಸಿದ್ದ ಪೂನಂ ಪಾಂಡೆ ಅವರಿಗೆ ಷಹಜಹಾನ್‌ಪುರದಿಂದ ಟಿಕೆಟ್ ಘೋಷಿಸಲಾಗಿದೆ.

ರಾಮ್ಪುರ್‌ ಖಾಸ್‌ನಿಂದ ಹಾಲಿ ಶಾಸಕಿ ಆರಾಧನಾ ಮಿಶ್ರಾ ಹಾಗೂ ಎನ್‌ಆರ್‌ಸಿ ವಿರೋಧಿಸಿ ಪ್ರತಿಭಟನೆ ನಡೆಸಿ ಜೈಲು ವಾಸ ಅನುಭವಿಸಿದ್ದ ಕಾಂಗ್ರೆಸ್‌ ನಾಯಕಿ ಸದಾಫ್‌ ಜಾಫರ್‌ ಅವರಿಗೆ ಲಖನೌ ಸೆಂಟ್ರಲ್‌ನಿಂದ ಟಿಕೆಟ್‌ ನೀಡಲಾಗಿದೆ. ಕೇಂದ್ರದ ಮಾಜಿ ಸಚಿವ ಸಲ್ಮಾನ್‌ ಖುರ್ಶಿದ್‌ ಅವರ ಪತ್ನಿ ಲೂಯಿಸ್‌ ಖುರ್ಶಿದ್‌, ನೋಡ್ಡಾದಿಂದ ಪಂಖುಡಿ ಪಾಠಕ್‌ ಸೇರಿದಂತೆ ಹಲವು ಮಹಿಳೆಯರಿಗೆ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.