ADVERTISEMENT

ಉ.ಪ್ರದೇಶ ಸರ್ವಾಂಗೀಣ ಅಭಿವೃದ್ಧಿಗೆ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅಡಿಪಾಯ: ಯೋಗಿ

ಪಿಟಿಐ
Published 21 ಆಗಸ್ಟ್ 2022, 14:19 IST
Last Updated 21 ಆಗಸ್ಟ್ 2022, 14:19 IST
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್   

ಲಖನೌ: ಉತ್ತರ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಭದ್ರ ಅಡಿಪಾಯ ಹಾಕಿಕೊಟ್ಟರು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭಾನುವಾರ ನೆನಪಿಸಿಕೊಂಡರು.

ಮಾಜಿ ಸಿಎಂ ಕಲ್ಯಾಣ್ ಸಿಂಗ್ ಅವರು ಹಾಕಿದ ಉತ್ತಮ ಆಡಳಿತದ ಅಡಿಪಾಯ ಉತ್ತರ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಆಧಾರ ಎಂದು ಅವರು ಹೇಳಿದರು.

ಕಲ್ಯಾಣ್ ಸಿಂಗ್ ಅವರ ಮೊದಲ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಅರ್ಪಿಸಿದ ಆದಿತ್ಯನಾಥ್, ಸ್ವಾತಂತ್ರ್ಯದ ನಂತರ ನಮ್ಮ ನೆನಪಿನಲ್ಲಿ ಮೂಡುವ ಉತ್ತಮ ಆಡಳಿತದ ಮೊದಲ ಸರ್ಕಾರವೆಂದರೆ 'ಬಾಬೂಜಿ' ಕಲ್ಯಾಣ್ ಸಿಂಗ್ ಅವರದ್ದು. 1991ರಲ್ಲಿ ಕಲ್ಯಾಣ್ ಸಿಂಗ್ ಸರ್ಕಾರವು ಸಮಾಜದ ಪ್ರತಿಯೊಂದು ವರ್ಗದ ಹಿತದೃಷ್ಟಿಯಿಂದ ಕೆಲಸ ನಿರ್ವಹಿಸಿತು. ರಾಜ್ಯದ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆ ಅಚ್ಚಳಿಯದೇ ಉಳಿಯುವಂತೆ ಕೆಲಸ ಮಾಡಿದರು ಎಂದು ಹೇಳಿದರು.

ಕಲ್ಯಾಣ್ ಸಿಂಗ್ ತಮ್ಮ ಸೀಮಿತ ಅಧಿಕಾರಾವಧಿಯಲ್ಲಿ ಸರ್ಕಾರವನ್ನು ಹೇಗೆ ನಡೆಸಬೇಕು ಎಂಬುದನ್ನು ತೋರಿಸಿಕೊಟ್ಟಿದ್ದರಲ್ಲದೆ ಉತ್ತಮ ಆಡಳಿತಕ್ಕೆ ಅಡಿಪಾಯ ಹಾಕಿದರು. ಅದುವೇ ರಾಜ್ಯದ ಒಟ್ಟಾರೆ ಅಭಿವೃದ್ಧಿಗೆ ಆಧಾರ ಎಂದು ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉತ್ತರ ಪ್ರದೇಶವು ವಿಶ್ವದ ಅತಿ ದೊಡ್ಡ ಆರ್ಥಿಕತೆಯತ್ತ ಬೆಳೆಯುತ್ತಿರುವಾಗ ಕಲ್ಯಾಣ್ ಸಿಂಗ್ ಸರ್ಕಾರದ ಮನಸ್ಥಿತಿಯೇ ನಮಗೆ ಮಾರ್ಗದರ್ಶನ ನೀಡುತ್ತಿದೆ ಎಂದು ಹೇಳಿದರು.

ಇದನ್ನೂ ಓದಿ:

ಕಲ್ಯಾಣ್ ಸಿಂಗ್, 1991 ಮತ್ತು 1997ರಲ್ಲಿ ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಅವರು ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.