ADVERTISEMENT

ನಾರದ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾದ ಹಿರಿಯ ನಾಯಕರು

ಪಿಟಿಐ
Published 4 ಜೂನ್ 2021, 8:16 IST
Last Updated 4 ಜೂನ್ 2021, 8:16 IST
ಮದನ್‌ ಮಿತ್ರಾ
ಮದನ್‌ ಮಿತ್ರಾ   

ಕೋಲ್ಕತ್ತ: ನಾರದ ಮಾರುವೇಷ ಕಾರ್ಯಾಚರಣೆ ಪ್ರಕರಣದ ಆರೋಪಿಗಳಾದ ನಾಲ್ವರು ಹಿರಿಯ ನಾಯಕರು ಇಲ್ಲಿನ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ ಹಾಜರಾದರು.

ಮೇ 17ರಂದು ನಾಲ್ವರಿಗೆ ಮಧ್ಯಂತರ ಜಾಮೀನು ನೀಡಿದ್ದ ನ್ಯಾಯಧೀಶರಾದ ಅನುಪಮ್‌ ಮುಖರ್ಜಿ ಅವರು, ಆರೋಪಿಗಳನ್ನು ಜೂನ್‌ 4ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಸೂಚಿಸಿದ್ದರು.

ಸಚಿವರುಗಳಾದ ಸುಬ್ರತಾ ಮುಖರ್ಜಿ ಮತ್ತು ಫಿರ್ಹಾದ್‌ ಹಕೀಮ್‌, ಟಿಎಂಸಿ ಶಾಸಕ ಮದನ್‌ ಮಿತ್ರಾ ಮತ್ತು ಮಾಜಿ ನಗರ ಮೇಯರ್‌ ಸೋವನ್‌ ಚಟರ್ಜಿ ಅವರು ವಿಚಾರಣೆಗೆ ಹಾಜರಾಗಿದ್ದರು.

ADVERTISEMENT

ಮಾರುವೇಷದ ಕಾರ್ಯಾಚರಣೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಮೇ 17ರಂದು ಈ ನಾಲ್ವರನ್ನು ಬಂಧಿಸಿತ್ತು. ಅದೇ ದಿನ ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿಗಳಿಗೆ ಮಧ್ಯಂತರ ಜಾಮೀನು ನೀಡಿತ್ತು. ಆದರೆ, ಕೋಲ್ಕತ್ತ ಹೈಕೋರ್ಟ್‌ ಈ ಆದೇಶಕ್ಕೆ ತಡೆ ನೀಡಿ, ಆರೋಪಿಗಳನ್ನು ನ್ಯಾಯಾಂಗ ವಶಕ್ಕೆ ನೀಡಿತ್ತು. ಆದರೆ ಬಳಿಕ ಮೇ 28ರಂದು ಹೈಕೋರ್ಟ್‌ನ ಐವರು ಸದಸ್ಯರ ಪೀಠವು ನಾಲ್ವರಿಗೆ ಜಾಮೀನು ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.