ಖಾಂಡವಾ: ಮಧ್ಯಪ್ರದೇಶದ ಖಾಂಡವಾ ಜಿಲ್ಲೆಯಲ್ಲಿ ಸಾಧ್ವಿ ರಿತಂಬರ ಅವರು ನಡೆಸುವ ಆಶ್ರಮದ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ನಾಲ್ವರು ಬಾಲಕಿಯರು ಬುಧವಾರ ಕಾಲುವೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
'ಮಾಂಧಾತಾ(ಓಂಕಾರೇಶ್ವರ) ಪೊಲೀಸ್ ಠಾಣಾ ವ್ಯಪ್ತಿಯ ಕೋಠಿ ಎಂಬ ಗ್ರಾಮದಲ್ಲಿ ಬುಧವಾರ ಬೆಳಿಗ್ಗೆ ಅವಘಡ ಸಂಭವಿಸಿದೆ. ಮೃತಪಟ್ಟ ಬಾಲಲಕಿಯರು 10-11 ವರ್ಷದವರಾಗಿದ್ದು, 5ನೇ ತರಗತಿ ವಿದ್ಯಾರ್ಥಿಗಳು. ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದ ಸಂದರ್ಭ ಓರ್ವ ಬಾಲಕಿ ಮುಳುಗಿದ್ದು, ರಕ್ಷಿಸಲು ಪ್ರಯತ್ನಿಸಿದ ಉಳಿದು ಮೂವರು ನೀರು ಪಾಲಾಗಿದ್ದಾರೆ' ಎಂದು ಪೊಲೀಸ್ ಅಧಿಕಾರಿ ಬಲರಾಮ್ ಸಿಂಗ್ ಹೇಳಿದ್ದಾರೆ.
'ಮೃತ ಬಾಲಕಿಯರು ಖರಗೋನ ಜಿಲ್ಲೆಗೆ ಸೇರಿದವರಾಗಿದ್ದಾರೆ. ಶವಗಳನ್ನು ಕಾಲುವೆಯಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ' ಎಂದು ಬಲರಾಮ್ ಸಿಂಗ್ ತಿಳಿಸಿದ್ದಾರೆ.
ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕಂಬನಿ ಮಿಡಿದಿದ್ದಾರೆ.
ಸಾಧ್ವಿ ರಿತಂಬರ ಅವರು ಹಿಂದುತ್ವದ ಪ್ರತಿಪಾದಕಿಯಾಗಿದ್ದು, 'ಹಿಂದೂ ದಂಪತಿ 4 ಮಕ್ಕಳಿಗೆ ಜನ್ಮ ನೀಡಬೇಕು, ಅವರಲ್ಲಿ ಇಬ್ಬರನ್ನು ದೇಶಕ್ಕೆ ಅರ್ಪಿಸಬೇಕು' ಎಂದು ಇತ್ತೀಚೆಗೆ ಕರೆ ನೀಡುವ ಮೂಲಕ ಸುದ್ದಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.