ADVERTISEMENT

ಮಣಿಪುರದಲ್ಲಿ ಗ್ರಾಮಸ್ಥರು–ಉಗ್ರರ ನಡುವೆ ಗುಂಡಿನ ಚಕಮಕಿ: ನಾಲ್ವರ ಸಾವು

ಪಿಟಿಐ
Published 11 ಆಗಸ್ಟ್ 2024, 8:14 IST
Last Updated 11 ಆಗಸ್ಟ್ 2024, 8:14 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಇಂಫಾಲ್: ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ತೆಂಗ್ನೌಪಾಲ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಮತ್ತು ಗ್ರಾಮ ಸ್ವಯಂಸೇವಕರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಶುಕ್ರವಾರ ಮೊಲ್ನೊಮ್ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್‌ಗೆ (ಯುಕೆಎಲ್‌ಎಫ್) ಸೇರಿದ ಒಬ್ಬ ಉಗ್ರಗಾಮಿ ಮತ್ತು ಅದೇ ಸಮುದಾಯದ ಮೂವರು ಗ್ರಾಮ ಸ್ವಯಂಸೇವಕರು ಮೃತಪಟ್ಟಿದ್ದಾರೆ.

ಹತ್ಯೆಗೆ ಪ್ರತೀಕಾರವಾಗಿ, ಗ್ರಾಮದ ಸ್ವಯಂಸೇವಕರು ಯುಕೆಎಲ್‌ಎಫ್‌ ಸ್ವಯಂಘೋಷಿತ ಅಧ್ಯಕ್ಷ ಎಸ್.ಎಸ್. ಹಾವ್‌ಕಿಪ್ ಅವರ ಮನೆಗೆ ಬೆಂಕಿ ಹಾಕಿ ಸುಟ್ಟು ಹಾಕಿದ್ದಾರೆ.

ಪಲ್ಲೆಲ್ ಪ್ರದೇಶದ ಸುಂಕ ವಸೂಲಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗುಂಡಿನ ಕಾಳಗ ನಡೆದಿರುವ ಶಂಕೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿದ್ದು, ಈವರೆಗೆ ಯಾರನ್ನೂ ಬಂಧಿಸಲಾಗಿಲ್ಲ.

ಕಳೆದ ವರ್ಷ ಮೇ ತಿಂಗಳಿನಿಂದ ಮಣಿಪುರದ ಮೈತೇಯಿ ಮತ್ತು ಕುಕಿ ಜನಾಂಗಗಳ ನಡುವೆ ನಡೆದ ಜನಾಂಗೀಯ ಹಿಂಸಾಚಾರದಲ್ಲಿ 200ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.