ಹೈದರಾಬಾದ್: ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಔಷಧ ತಯಾರಿಕಾ ಕಂಪನಿಯೊಂದರ ರಿಯಾಕ್ಟರ್‌ನಲ್ಲಿ ಬುಧವಾರ ಸಂಭವಿಸಿದ ಸ್ಫೋಟದಿಂದ ನಾಲ್ವರು ಮೃತಪಪಟ್ಟಿದ್ದು, 10 ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಜೆ 5 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ. ಸ್ಫೋಟದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿದೆ.
‘ರಿಯಾಕ್ಟರ್ ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಸುತ್ತಲಿದ್ದ ಜನರನ್ನು ದೂರಕ್ಕೆ ಚಿಮ್ಮುವಂತೆ ಮಾಡಿತು. ಇದುವರೆಗೆ 10–15 ಜನರಿಗೆ ತೀವ್ರ ಗಾಯಗಳಾಗಿರುವುದು ಗೊತ್ತಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪರಿಹಾರ ಕಾರ್ಯ ನಡೆಯುತ್ತಿದೆ’ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.