ADVERTISEMENT

ತೆಲಂಗಾಣ | ರ್‍ಯಾಗಿಂಗ್: ನಾಲ್ವರು MBBS ವಿದ್ಯಾರ್ಥಿಗಳು ಅಮಾನತು

ಪಿಟಿಐ
Published 18 ನವೆಂಬರ್ 2024, 6:33 IST
Last Updated 18 ನವೆಂಬರ್ 2024, 6:33 IST
<div class="paragraphs"><p>ಅಮಾನತು</p></div>

ಅಮಾನತು

   

ಹೈದರಾಬಾದ್‌: ಕಿರಿಯ ವಿದ್ಯಾರ್ಥಿಗಳನ್ನು ರ್‍ಯಾಗಿಂಗ್‌ ಮಾಡಿದ್ದಕ್ಕಾಗಿ ತೆಲಂಗಾಣದ ನಲಗೊಂಡಾ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ನ.11 ರಂದು ಪುರುಷರ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ಕೇರಳದ ಐವರು ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ದೈಹಿಕವಾಗಿ ಹಲ್ಲೆ ನಡೆಸಿ ರ್‍ಯಾಗಿಂಗ್‌ ಮಾಡಿದ್ದಾರೆ. ಈ ಕುರಿತು ಕಿರಿಯ ವಿದ್ಯಾರ್ಥಿಗಳ ದೂರು ಆಧರಿಸಿ ನಾಲ್ವರನ್ನು ಕಾಲೇಜಿನಿಂದ ಅಮಾನತು ಮಾಡಲಾಗಿದೆ.

ADVERTISEMENT

ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ಸಹಯೋಗದಲ್ಲಿ ರ್‍ಯಾಗಿಂಗ್‌ ವಿರೋಧಿ ಜಾಗೃತಿ ಸಭೆಗಳನ್ನು ನಡೆಸಲು ಪ್ರಸ್ತಾಪಿಸಲಾಗಿದೆ ಎಂದು ಕಾಲೇಜು ಪ್ರಾಂಶುಪಾಲರು ತಿಳಿಸಿದ್ದಾರೆ.

ಇತ್ತೀಚೆಗೆ ಗುಜರಾತ್‌ನ ಪಾಟನ್ ಜಿಲ್ಲೆಯ ವೈದ್ಯಕೀಯ ಕಾಲೇಜಿನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಹಿರಿಯ ವಿದ್ಯಾರ್ಥಿಗಳು ಮಾಡಿದ ರ್‍ಯಾಗಿಂಗ್‌ನಿಂದ ಮೃತಪಟ್ಟಿದ್ದರು. ಹಿರಿಯ ವಿದ್ಯಾರ್ಥಿಗಳು ಪರಿಚಯ ಮಾಡಿಕೊಳ್ಳುವಂತೆ ಹೇಳಿ ಮೂರು ಗಂಟೆ ನಿಲ್ಲಿಸಿದ ಪರಿಣಾಮ ಅನಿಲ್‌ ಎನ್ನುವ ವಿದ್ಯಾರ್ಥಿ ಪ್ರಜ್ಞೆ ತಪ್ಪಿ ಬಿದ್ದು ಜೀವ ಕಳೆದುಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.