ADVERTISEMENT

ತಮಿಳುನಾಡು | ವ್ಯಾನ್‌ ಹರಿದು ನಾಲ್ವರು ಯಾತ್ರಿಕರು ಸಾವು

ಪಿಟಿಐ
Published 17 ಜುಲೈ 2024, 6:29 IST
Last Updated 17 ಜುಲೈ 2024, 6:29 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ತಂಜಾವೂರು: ತಂಜಾವೂರು- ತಿರುಚ್ಚಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾದಯಾತ್ರಿಗಳ ಮೇಲೆ ವ್ಯಾನ್‌ ಹರಿದ ಪರಿಣಾಮ ಒಬ್ಬ ಮಹಿಳೆ ಸೇರಿದಂತೆ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಪಾದಯಾತ್ರಿಗಳು ತೀರ್ಥಯಾತ್ರೆ ಕೈಗೊಂಡಿದ್ದರು. ಸಮಯಪುರಂನ ಮಾರಿಯಮ್ಮನ್ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ADVERTISEMENT

ತಿರುಚ್ಚಿಗೆ ತೆರಳುತ್ತಿದ್ದ ವ್ಯಾನ್‌ವೊಂದು ವೇಗವಾಗಿ ಚಲಾಯಿಸಿದ್ದರ ಪರಿಣಾಮ ವಳಂಬಕುಡಿ ಗ್ರಾಮದ ಬಳಿ ರಸ್ತೆಯಲ್ಲಿ ಸಾಗುತ್ತಿದ್ದ ಯಾತ್ರಿಕರ ಮೇಲೆ ಹರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಇಬ್ಬರನ್ನು ತಂಜಾವೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.