ಬೆಂಗಳೂರು: ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಉತ್ತರಾಖಂಡದ ಸಹಸ್ತ್ರ ತಾಲ್‌ನಲ್ಲಿ ಸಿಕ್ಕಿಬಿದ್ದಿರುವ 19 ಚಾರಣಿಗರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದವರಿಗಾಗಿ ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಪಿಟಿಐಗೆ ತಿಳಿಸಿದ್ದಾರೆ.
ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಿದೆ. ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು ಎಂದು ತಿಳಿದು ಬಂದಿದೆ.
ಗಢವಾಲ್ ಜಿಲ್ಲಾಧಿಕಾರಿ ರಕ್ಷಣಾ ಕಾರ್ಯಾಚರಣೆಯ ಮೇಲ್ನೋಟ ವಹಿಸುತ್ತಿದ್ದಾರೆ. ಭಾರತೀಯ ವಾಯುಪಡೆಯ ನೆರವನ್ನು ಪಡೆಯಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.