ADVERTISEMENT

ಫ್ರಾನ್ಸ್‌ನಲ್ಲಿ ಅಧ್ಯಯನ ನಡೆಸಲು ಭಾರತೀಯರಿಗೆ ಆಹ್ವಾನ ನೀಡಿದ ಮ್ಯಾಕ್ರನ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಜನವರಿ 2024, 6:25 IST
Last Updated 26 ಜನವರಿ 2024, 6:25 IST
   

ನವದೆಹಲಿ: ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್‌ ಅವರು ಭಾರತೀಯ ವಿದ್ಯಾರ್ಥಿಗಳನ್ನು ಫ್ರಾನ್ಸ್‌ನಲ್ಲಿ ಅಧ್ಯಯನ ಮಾಡಲು ಆಹ್ವಾನಿಸಿದ್ದಾರೆ. 2030 ರ ವೇಳೆಗೆ 30,000 ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಫ್ರಾನ್ಸ್‌ನಲ್ಲಿ ಅಧ್ಯಯನ ನಡೆಸಲು ಸಾಧ್ಯವಾಗಿಸುವ ಗುರಿಯಿದೆ ಎಂದು ಅವರು ತಿಳಿಸಿದ್ದಾರೆ.

75ನೇ ಗಣರಾಜ್ಯೋತ್ಸವದ ಅಂಗವಾಗಿ ದೆಹಲಿಗೆ ಆಗಮಿಸಿದ ಅವರು ಈ ಘೋಷಣೆ ಮಾಡಿದ್ದು, ತಮ್ಮ ಎಕ್ಸ್‌ ಖಾತೆಯಲ್ಲಿ ಸಂಪೂರ್ಣ ವಿವರ ಹಂಚಿಕೊಂಡಿದ್ದಾರೆ.

‘2030 ರಲ್ಲಿ ಫ್ರಾನ್ಸ್‌ನಲ್ಲಿ 30,000 ಭಾರತೀಯ ವಿದ್ಯಾರ್ಥಿಗಳು. ಇದು ಬಹಳ ಮಹತ್ವಕಾಂಕ್ಷೆಯ ಗುರಿಯಾಗಿದೆ, ಆದರೆ ನಾನು ಅದನ್ನು ಮಾಡಲು ನಿರ್ಧರಿಸಿದ್ದೇನೆ. ಹೇಗೆ ಎಂಬುದು ಇಲ್ಲಿದೆ’ ಎಂದು ಬರೆದುಕೊಂಡಿದ್ದಾರೆ. 

ADVERTISEMENT

ಬಹುಮುಖ್ಯವಾಗಿ ಫ್ರಾನ್ಸ್ ದೇಶದಲ್ಲಿ ಭಾರತೀಯ ಹಳೆಯ ವಿದ್ಯಾರ್ಥಿಗಳಿಗೆ ವೀಸಾ ಪ್ರಕ್ರಿಯೆಯನ್ನು ಸುಗಮಗೊಳಿಸಲಾಗುತ್ತದೆ. ಜತೆಗೆ ಫ್ರೆಂಚ್ ಮಾತನಾಡದ ವಿದ್ಯಾರ್ಥಿಗಳಿಗೆ ಅಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಲು ಅಂತರರಾಷ್ಟ್ರೀಯ ತರಗತಿಗಳನ್ನು ಆರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.

ಭಾರತ ಮತ್ತು ಪ್ರಾನ್ಸ್‌ ನಡುವಿನ ಸಂಬಂಧವನ್ನು ಬಲಪಡಿಸುವ  ಪ್ರಯತ್ನದ ಭಾಗವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.