ADVERTISEMENT

ಉಚಿತ ಕಾನೂನು ನೆರವು ಪ್ರತಿಯೊಬ್ಬರ ಹಕ್ಕು: ಸುಪ್ರೀಂ ಕೋರ್ಟ್

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2024, 15:57 IST
Last Updated 23 ಅಕ್ಟೋಬರ್ 2024, 15:57 IST
<div class="paragraphs"><p>ಸುಪ್ರೀಂ ಕೋರ್ಟ್</p></div>

ಸುಪ್ರೀಂ ಕೋರ್ಟ್

   

ನವದೆಹಲಿ: ಕಾನೂನು ನೆರವನ್ನು ಉಚಿತವಾಗಿ ಪಡೆಯುವುದು ಪ್ರತಿಯೊಬ್ಬರ ಮೂಲಭೂತ ಹಕ್ಕು. ಬಡವರು ಎಂಬ ಕಾರಣಕ್ಕೆ, ಅವರಿಗೆ ಒದಗಿಸುವ ಕಾನೂನು ನೆರವು ಕಡಿಮೆ ಗುಣಮಟ್ಟದ್ದಾಗಿ ಇರಕೂಡದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ಹೇಳಿದೆ.

ಕೈದಿಗೂ ಕೂಡ ಕಾನೂನು ನೆರವು ಪಡೆಯುವ ಮೂಲಭೂತ ಹಕ್ಕಿದೆ. ಈ ಅಂಶವನ್ನು ಸಂವಿಧಾನದ 21ನೇ ವಿಧಿಯಡಿ ಗುರುತಿಸಬಹುದು ಎಂದು ನ್ಯಾಯಮೂರ್ತಿಗಳಾದ ಬಿ.ಆರ್‌.ಗವಾಯಿ ಮತ್ತು ಕೆ.ವಿ.ವಿಶ್ವನಾಥನ್‌ ಅವರು ಇದ್ದ ನ್ಯಾಯಪೀಠ ಹೇಳಿದೆ.

ADVERTISEMENT

ಸಾಮಾಜಿಕ ಕಾರ್ಯಕರ್ತ ಸುಹಾಸ್‌ ಚಕ್ಮಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ವಿಚಾರಣೆ ವೇಳೆ, ನ್ಯಾಯಪೀಠ ಈ ಮಾತು ಹೇಳಿದೆ.

ವಿಚಾರಣಾ ಕೈದಿಗಳು ಅಥವಾ ಅಪರಾಧಿಗಳು ಇರಲಿ ಎಲ್ಲ ಕೈದಿಗಳಿಗೆ ಉಚಿತ ಕಾನೂನು ನೆರವು ಸಿಗುವಂತಾಗಬೇಕು ಎಂದ ನ್ಯಾಯಪೀಠ, ಈ ಕುರಿತು ಕಾನೂನು ಸೇವೆಗಳ ಪ್ರಾಧಿಕಾರಗಳ ಕಾಯ್ದೆ–1987ರಡಿ ಹಲವು ನಿರ್ದೇಶನಗಳನ್ನು ನೀಡಿದೆ.

ನ್ಯಾಯಪೀಠ ಹೇಳಿದ್ದೇನು?

  • ವಿವಿಧ ಹಂತಗಳಲ್ಲಿ ಕಾನೂನು ನೆರವನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವುದಕ್ಕಾಗಿ ಕಾನೂನು ಸೇವೆಗಳ ಪ್ರಾಧಿಕಾರಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಹಕಾರ ಮುಂದುವರಿಸಬೇಕು

  • ಪೊಲೀಸ್ ಠಾಣೆಗಳು ಅಂಚೆ ಕಚೇರಿಗಳು ಬಸ್‌ ಮತ್ತು ರೈಲು ನಿಲ್ದಾಣಗಳು ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹತ್ತಿರದ ಕಾನೂನು ನೆರವು ಘಟಕ/ಕಚೇರಿಗಳ ವಿಳಾಸ ಸಂಪರ್ಕ ಸಂಖ್ಯೆ ಪ್ರದರ್ಶಿಸಬೇಕು

  • ಮಾಹಿತಿಯು ಸ್ಥಳೀಯ ಭಾಷೆ ಮತ್ತು ಇಂಗ್ಲಿಷ್‌ನಲ್ಲಿ ಇರಬೇಕು

  • ಕಾನೂನು ನೆರವು ಕುರಿತ ಮಾಹಿತಿ ಒಳಗೊಂಡ ಕಿರುಪುಸ್ತಕಗಳನ್ನು ಆಯಾ ರಾಜ್ಯಗಳ ಸ್ಥಳೀಯ ಭಾಷೆಗಳಲ್ಲಿ ಮುದ್ರಿಸಿ ವ್ಯಾಪಕ ಪ್ರಚಾರ ಮಾಡಬೇಕು

  • ಕಾನೂನು ಸೇವೆಗಳ ಪ್ರಾಧಿಕಾರಗಳಿಂದ ಸಿಗುವ ಪ್ರಯೋಜನ ಕುರಿತು ದೇಶದಾದ್ಯಂತ ಪ್ರಚಾರ ಕೈಗೊಳ್ಳಬೇಕು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.