ಲಖನೌ: ಶಿವಲಿಂಗ ಪತ್ತೆಯಾಗಿದೆ ಎನ್ನಲಾದ ಜ್ಞಾನವಾಪಿ ಮಸೀದಿಯ ಸಂಕೀರ್ಣದಲ್ಲಿ ಪೂಜೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಕೋರಿ ವಾರಾಣಸಿ ನ್ಯಾಯಾಲಯಕ್ಕೆ ಹೊಸ ಅರ್ಜಿಯೊಂದು ಸಲ್ಲಿಕೆಯಾಗಿದೆ.
ಈ ಸಂಬಂಧ ಬುಧವಾರ ಅರ್ಜಿ ಸಲ್ಲಿಸಿರುವ ರೇಖಾ ಪಾಠಕ್, ಮಂಜು ವ್ಯಾಸ್ ಮತ್ತು ಸೀತಾ ಸಾಹು ಅವರು, 'ಮಸೀದಿಯ ನೆಲಮಹಡಿಯಲ್ಲಿ ಮತ್ತೊಂದು ಸುತ್ತಿನ ಸಮೀಕ್ಷೆ ನಡೆಸಬೇಕು. ಅಲ್ಲದೆ, ಆ ಜಾಗದಲ್ಲಿ ಬೇರೆ ಏನಾದರೂ ಇದೆಯೇ ಎಂಬುದನ್ನು ತಿಳಿಯಲು ಅವಶೇಷಗಳನ್ನು ತೆರವು ಮಾಡಬೇಕು' ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಅರ್ಜಿಯನ್ನು ನ್ಯಾಯಾಲಯವು ಗುರುವಾರ ವಿಚಾರಣೆ ನಡೆಸುವ ಸಾಧ್ಯತೆಯಿದೆ ಎಂದು ಅರ್ಜಿದಾರರ ಪರ ವಕೀಲರು ತಿಳಿಸಿದ್ದಾರೆ.
ಸದ್ಯ ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಇದೆ ಎನ್ನಲಾದ ಸ್ಥಳಕ್ಕೆ ರಕ್ಷಣೆ ನೀಡಿ, ನಮಾಜ್ ಮಾಡಲು ಅವಕಾಶ ಕಲ್ಪಿಸುವಂತೆ ಸುಪ್ರೀಂ ಕೋರ್ಟ್ ವಾರಾಣಸಿ ಜಿಲ್ಲಾಡಳಿತಕ್ಕೆ ಈಗಾಗಲೇ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.