ADVERTISEMENT

ನೀಟ್ ಕುರಿತು ಸಿಬಿಐ, ಇ.ಡಿ. ತನಿಖೆ ಕೋರಿ ಅರ್ಜಿ

ಪಿಟಿಐ
Published 22 ಜೂನ್ 2024, 15:31 IST
Last Updated 22 ಜೂನ್ 2024, 15:31 IST
‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಯತ್ನ: ಬಂಧನ
‘ನೀಟ್’ ಪ್ರಶ್ನೆಪತ್ರಿಕೆ ಸೋರಿಕೆ ಯತ್ನ: ಬಂಧನ   

ನವದೆಹಲಿ (ಪಿಟಿಐ): ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ನಡೆದ ನೀಟ್‌–ಯುಜಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆಗೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ಸೂಚಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ಗೆ ಹೊಸದಾಗಿ ಅರ್ಜಿಯೊಂದನ್ನು ಸಲ್ಲಿಸಲಾಗಿದೆ.

ಪರೀಕ್ಷೆಗೆ ಹಾಜರಾಗಿದ್ದ 10 ಮಂದಿ ವಿದ್ಯಾರ್ಥಿಗಳು ಈ ಅರ್ಜಿ ಸಲ್ಲಿಸಿದ್ದಾರೆ. ‍ಅಕ್ರಮಗಳ ಬಗ್ಗೆ ತನಿಖೆ ನಡೆಸುತ್ತಿರುವ ಬಿಹಾರ ಪೊಲೀಸರಿಗೆ, ತನಿಖೆಯನ್ನು ಬೇಗನೆ ನಡೆಸಿ ವರದಿಯೊಂದನ್ನು ಸಲ್ಲಿಸಲು ಸೂಚಿಸಬೇಕು ಎಂದು ಕೂಡ ಅರ್ಜಿಯಲ್ಲಿ ಕೋರಲಾಗಿದೆ.

‘ಪರೀಕ್ಷೆಯನ್ನು ರದ್ದುಪಡಿಸುವುದರಿಂದ ಆಗುವ ಪರಿಣಾಮಗಳ ಬಗ್ಗೆ ಅರ್ಜಿದಾರರಿಗೆ ಪೂರ್ಣ ಅರಿವಿದೆ. ಆದರೆ ಇಲ್ಲಿ ಪರ್ಯಾಯಗಳೇ ಉಳಿದಿಲ್ಲ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ADVERTISEMENT

ನೀಟ್–ಯುಜಿ 2024 ಪರೀಕ್ಷೆಯನ್ನು ರದ್ದುಪಡಿಸಬೇಕು, ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆಗೆ ಆದೇಶಿಸಬೇಕು ಎಂಬ ಕೋರಿಕೆ ಇರುವ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಈಗಾಗಲೇ ಸಲ್ಲಿಕೆಯಾಗಿವೆ. ಅವುಗಳಿಗೆ ಸಂಬಂಧಿಸಿದಂತೆ, ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಗೆ (ಎನ್‌ಟಿಎ) ಕೋರ್ಟ್‌ ನೋಟಿಸ್ ಜಾರಿಗೊಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.