ನವದೆಹಲಿ: ರಾಜ್ಯಸಭೆ ವಿರೋಧ ಪಕ್ಷದ ಮಾಜಿ ನಾಯಕ ಗುಲಾಂ ನಬಿ ಆಜಾದ್ ಅವರ ನಿವಾಸದಲ್ಲಿ 'ಜಿ-23'ಯ ಕೆಲವು ನಾಯಕರು ಔತಣಕೂಟದಲ್ಲಿ ಪಾಲ್ಗೊಂಡರು. ಈ ವೇಳೆ, 'ಜಿ-23' ನ ಭವಿಷ್ಯದ ಕಾರ್ಯತಂತ್ರ ರೂಪಿಸಲು ಮತ್ತು ಈಗಷ್ಟೇ ಮುಕ್ತಾಯಗೊಂಡ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಚರ್ಚಿಸಿದರು.
ಈ ಗುಂಪು ಈ ಹಿಂದೆ ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಅವರ ನಿವಾಸದಲ್ಲಿ ಔತಣಕೂಟವನ್ನು ಆಯೋಜಿಸಿತ್ತು, ಆದರೆ ಕೊನೆಯ ಕ್ಷಣದಲ್ಲಿ ಅದನ್ನು ಬದಲಾಯಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಆನಂದ್ ಶರ್ಮಾ, ಕಪಿಲ್ ಸಿಬಲ್, ಮನೀಶ್ ತಿವಾರಿ, ಶಶಿ ತರೂರ್ ಮತ್ತು ಸಂದೀಪ್ ದೀಕ್ಷಿತ್ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.
ಈಗ ಹೊಸದಾಗಿ, ಪಟಿಯಾಲದ ಸಂಸದೆ ಪ್ರಣೀತ್ ಕೌರ್, ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ್ ಸಿಂಗ್ ವಘೇಲಾ, ಮಾಜಿ ಕೇಂದ್ರ ಸಚಿವ ಮಣಿ ಶಂಕರ್ ಅಯ್ಯರ್ ಮತ್ತು ಹರಿಯಾಣದ ಮಾಜಿ ಸ್ಪೀಕರ್ ಕುಲದೀಪ್ ಶರ್ಮಾ ಕೂಡ ಜಿ-23' ಅನ್ನು ಸೇರಿಕೊಂಡಿದ್ದಾರೆ.
ಔತಣಕೂಟಕ್ಕೆ ಹಾಜರಾಗುವಂತೆ ಇತರೆ ಕಾಂಗ್ರೆಸ್ಸಿಗರಿಗೂ ಮುಕ್ತ ಆಹ್ವಾನ ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.